ADVERTISEMENT

ಸಮೀಕ್ಷೆ: ಪರಿಶೀಲನೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2025, 2:00 IST
Last Updated 28 ಸೆಪ್ಟೆಂಬರ್ 2025, 2:00 IST
ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಪರಿಶೀಲನೆ ನಡೆಸಿದರು
ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದಲ್ಲಿ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಪರಿಶೀಲನೆ ನಡೆಸಿದರು   

ದೇವನಹಳ್ಳಿ: ತಾಲ್ಲೂಕಿನ ಕುಂದಾಣ ಗ್ರಾಮದಲ್ಲಿ ನಡೆದ ಸಮೀಕ್ಷೆ ಕಾರ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಶನಿವಾರ ಮನೆ ಮನೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಸಾರ್ವಜನಿಕರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಮರ್ಪಕವಾದ ಮಾಹಿತಿ ನೀಡಿ ಗಣತಿದಾರರಿಗೆ ಸಹಕರಿಸಬೇಕು. ಆಧಾರ್ ಕಾರ್ಡ್‌ಗೆ ಮೊಬೈಲ್ ನಂಬರ್ ಲಿಂಕ್ ಮಾಡಿಲ್ಲದವರು ಲಿಂಕ್ ಮಾಡಿಕೊಳ್ಳಬೇಕು. ಹಾಗೆಯೇ ಅಗತ್ಯ ದಾಖಲೆಗಳಿಗೆ ಕೆವೈಸಿ ಲಿಂಕ್ ಮಾಡುವುದು ಕಡ್ಡಾಯವಾಗಿದೆ ಎಂದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು, ದೇವನಹಳ್ಳಿ ಪುರಸಭೆ ಅಧ್ಯಕ್ಷ ಡಿ.ಎಂ ಮುನಿಕೃಷ್ಣ, ತಾಲ್ಲೂಕು ಗ್ಯಾರಂಟಿ ಅಧ್ಯಕ್ಷರು ಸಿ.ಜಗನ್ನಾಥ್, ಬಯಪ ಅಧ್ಯಕ್ಷ ಶಾಂತಕುಮಾರ್, ತಹಶೀಲ್ದಾರ್ ಅನಿಲ್.ಎಂ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಸಿ ಮಂಜುನಾಥ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.