ADVERTISEMENT

ದೇವನಹಳ್ಳಿ| ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳಿ: ವಿ.ಮನೋಹರ್

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 3:18 IST
Last Updated 13 ಜನವರಿ 2026, 3:18 IST
<div class="paragraphs"><p>ವಿಜಯಪುರ ಸರ್ಕಾರಿ ಮಾದರಿ ಹೆಣ್ಣುಮಕ್ಕಳ ಪಾಠಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು</p></div>

ವಿಜಯಪುರ ಸರ್ಕಾರಿ ಮಾದರಿ ಹೆಣ್ಣುಮಕ್ಕಳ ಪಾಠಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು

   

ವಿಜಯಪುರ (ದೇವನಹಳ್ಳಿ): ಭಾರತದ ಸಾಂಸ್ಕೃತಿ ರಾಯಭಾರಿ ಸ್ವಾಮಿ ವಿವೇಕಾನಂದರ ಜೀವನ ಮತ್ತು ತತ್ವಾದರ್ಶಗಳು ಪ್ರತಿಯೊಬ್ಬ ವಿದ್ಯಾರ್ಥಿಯೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸರ್ಕಾರಿ ಮಾದರಿ ಹೆಣ್ಣುಮಕ್ಕಳ ಪಾಠಶಾಲೆಯ ಮುಖ್ಯಶಿಕ್ಷಕ ವಿ.ಮನೋಹರ್ ಹೇಳಿದರು.

ಇಲ್ಲಿನ ಸರ್ಕಾರಿ ಮಾದರಿ ಹೆಣ್ಣುಮಕ್ಕಳ ಪಾಠಶಾಲೆಯಲ್ಲಿ ಸೋಮವಾರ ಸ್ವಾಮಿ ವಿವೇಕಾನಂದರ ಜಯಂತಿಯಲ್ಲಿ ಮಾತಮಾಡಿದರು.

ADVERTISEMENT

ಸ್ವಾಮಿ ವಿವೇಕಾನಂದರ ತತ್ವಾದರ್ಶಗಳು ಎಂದೆಂದಿಗೂ ಪ್ರಸ್ತುತ, ವಿವೇಕಾನಂದರ ತತ್ವ ಸಿದ್ಧಾಂತಗಳನ್ನು ಹಾಗೂ ಅವರನ್ನು ಚೈತನ್ಯ ಸ್ಪೂರ್ತಿಯಾಗಿ ತೆಗೆದುಕೊಂಡು ಜೀವನದಲ್ಲಿ ಮುನ್ನಡೆಯಬೇಕು ಎಂದರು.

ಇಂದಿನ ಯುವಜನಾಂಗ ಸ್ವಾಮಿ ವಿವೇಕಾನಂದ, ಗೌತಮ ಬುದ್ಧ, ಅಂಬೇಡ್ಕರ್, ಗಾಂಧೀಜಿಯಂತಹ ಮಹಾನ್ ನಾಯಕರನ್ನು ಆದರ್ಶವಾಗಿ ತೆಗೆದುಕೊಳ್ಳಬೇಕು. ಪೋಷಕರು ಮಕ್ಕಳನ್ನು ಶಾಲಾ-ಕಾಲೇಜುಗಳಿಗೆ ಕಳುಹಿಸಬೇಕಾದರೆ ವಿದ್ಯಾರ್ಥಿಗಳ ಮೇಲೆ ಸಾಕಷ್ಟು ಭರವಸೆ ಇಟ್ಟಿರುತ್ತಾರೆ. ಅವರ ಭರವಸೆಗಳನ್ನು ಹುಸಿ ಮಾಡದೆ ವಿದ್ಯಾರ್ಥಿಗಳು ಗುರಿಯತ್ತ ಸಾಗಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.