ADVERTISEMENT

ಸದನದಲ್ಲಿ ನೇಕಾರರ ಸಮಸ್ಯೆ ಪ್ರಸ್ತಾವ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 2:47 IST
Last Updated 23 ಸೆಪ್ಟೆಂಬರ್ 2020, 2:47 IST
ಟಿ.ವೆಂಕಟರಮಣಯ್ಯ
ಟಿ.ವೆಂಕಟರಮಣಯ್ಯ   

ದೊಡ್ಡಬಳ್ಳಾಪುರ: ‘ಲಾಕ್‌ಡೌನ್‌ ನಂತರ ತಾಲ್ಲೂಕಿನ ಹೂವು ಬೆಳೆಗಾರರು ಹಾಗೂ ನೇಕಾರರ ಸಂಕಷ್ಟ ಕುರಿತು ಮಂಗಳವಾರ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿದ್ದಾರೆ.

‘ಲಾಕ್‌ಡೌನ್‌ ಸಂದರ್ಭದಲ್ಲಿ ಹೂವು ಬೆಳೆಗಾರರಿಗೆ ಹೆಕ್ಟೇರ್‌ಗೆ ₹ 25 ಸಾವಿರ ನಷ್ಟ ಪರಿಹಾರ ನೀಡುವ ಕುರಿತು ಘೋಷಣೆ ಮಾಡಿತ್ತು. ಆದರೆ ಹಲವಾರು ತಾಂತ್ರಿಕ ಕಾರಣಗಳಿಂದಾಗಿ ಇಲ್ಲಿಯವರೆಗೆ ತಾಲ್ಲೂಕಿನ 750 ಹೂವು ಬೆಳೆಗಾರರಿಗೆ ₹21 ಲಕ್ಷ ಮಾತ್ರ ಪರಿಹಾರ ಬಂದಿದೆ. ಇದೇ ರೀತಿ ನೇಕಾರ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರ ಪಟ್ಟಿಗೆ ಸೇರ್ಪಡೆ ಮಾಡಬೇಕು’ ಎನ್ನುವ ಕುರಿತಂತೆ ಮನವಿ ಮಾಡಿದ್ದಾರೆ.

ನಗರದ ಸರ್ಕಾರಿ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯನ್ನಾಗಿ ಘೋಷಣೆ ಮಾಡಲಾಗಿದೆ. ಆದರೆ ಇದಕ್ಕೆ ಹಣ ಬಿಡುಗಡೆ ಮಾಡಬೇಕು. ತಾಲ್ಲೂಕಿನಲ್ಲಿ ಕೊರೊನಾ ಸೋಂಕಿನಿಂದ 70 ಜನ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷೆಗೆ ಅಗತ್ಯ ಇರುವ ಕಿಟ್‌ ನೀಡುವಂತೆ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.