
ತಾವರೆಕೆರೆ(ಹೊಸಕೋಟೆ): ರಾಮೇಶ್ವರ ದೇವಾಲಯ ಸಂಪರ್ಕಿಸುವ ರಸ್ತೆ ನಿರ್ಮಾಣ ಕಾಮಗಾರಿಗೆ ಚಾಲನೆ ಶಾಸಕ ಶರತ್ ಬಚ್ಚೇಗೌಡ ಚಾನೆ ನೀಡಿದರು.
ರಾಮೇಶ್ವರ ದೇವಾಲಯದಲ್ಲಿ ಪ್ರತಿ ಹತ್ತು ವರ್ಷಕ್ಕೊಮ್ಮೆ ದೊಡ್ಡದೇವರ ಜಾತ್ರೆ ನಡೆಯುತ್ತದೆ. ಈ ವರ್ಷ ಮಾರ್ಚ್ 28 ರಿಂದ ಏಪ್ರಿಲ್ 5 ರವರೆಗೆ ನಡೆಯುವ ದೊಡ್ಡದೇವರ ಜಾತ್ರೆಗೆ 2 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ. ಜಾತ್ರೆಗೆ ಬರುವವರ ಪ್ರಯಾಣ ಉತ್ತಮವಾಗಿರಲಿ ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗಲೆಂದು ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ದೇವಾಲಯಕ್ಕೆ ತೆರಳಲು ಸಮರ್ಪಕ ರಸ್ತೆ ಇಲ್ಲದ ಕಾರಣ ಶಾಸಕರ ಅನುದಾನ ಹಾಗೂ ಪಂಚಾಯಿತಿ ಅನುದಾನದಡಿ ₹75 ಲಕ್ಷ ವೆಚ್ಚದಲ್ಲಿ ರಸ್ತೆ ಮತ್ತು ಕಾಲುವೆ ಕಾಮಗಾರಿ ನಡೆಸಲಾಗುತ್ತಿದೆ ಎಂದರು.
ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ವಿ.ರಾಜಶೇಖರ್‌ಗೌಡ, ಟಿ.ಎಸ್.ರಾಜಶೇಖರ್, ಮಾಜಿ ಗ್ರಾ.ಪಂ ಅಧ್ಯಕ್ಷರಾದ ಆರ್.ರವಿಕುಮಾರ್, ಕಸ್ತೂರಿ ನಂಜಪ್ಪ, ಪಿಡಿಒ ಮುನಿಗಂಗಯ್ಯ, ಎಪಿಎಂಸಿ ಅಧ್ಯಕ್ಷ ದೇವರಾಜ್, ಮುಖಂಡರಾದ ಗುರುಬಸಪ್ಪ, ಬಾಣಮಕಾನಹಳ್ಳಿ ರಮೇಶ್, ಮಂದೀಪ್‌ಗೌಡ, ಗಡಿಗೇನಹಳ್ಳಿ ನಂಜಪ್ಪ, ಆರ್.ಮಂಜುನಾಥ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.