ADVERTISEMENT

ಆನೇಕಲ್: ಸರ್ವೋತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 2:03 IST
Last Updated 15 ಸೆಪ್ಟೆಂಬರ್ 2025, 2:03 IST
ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಸಂಯುಕ್ತ ಪ್ರೌಢ ಶಾಲೆಯಲ್ಲಿ ಭಾನುವಾರ ಗುರುವಂದನಾ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಲಾಯಿತು
ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಸಂಯುಕ್ತ ಪ್ರೌಢ ಶಾಲೆಯಲ್ಲಿ ಭಾನುವಾರ ಗುರುವಂದನಾ ಕಾರ್ಯಕ್ರಮದಲ್ಲಿ ಶಿಕ್ಷಕರನ್ನು ಸನ್ಮಾನಿಸಲಾಯಿತು   

ಆನೇಕಲ್ : ತಾಲ್ಲೂಕಿನ ಹೆಬ್ಬಗೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಸಂಯುಕ್ತ ಪ್ರೌಢ ಶಾಲೆಯಲ್ಲಿ ಭಾನುವಾರ ಗುರುವಂದನಾ, ಸ್ನೇಹ ಸಂಗಮ ಕಾರ್ಯಕ್ರದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ 20ಕ್ಕೂ ಹೆಚ್ಚು ಶಿಕ್ಷಕರಿಗೆ ಸರ್ವೋತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಯಿತು.

ಗಾಯಕ ಶಶಿಧರ್‌ ಕೋಟೆ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಓದಿರುವ ಹಲವಾರು ಮಂದಿ ಉನ್ನತ ಸಾಧನೆ ಮಾಡಿದ್ದಾರೆ. ಅವರ ಸಾಧನೆಗೆ ಸ್ಫೂರ್ತಿ ಮತ್ತು ದಾರಿ ನೀಡಿದ ಶಿಕ್ಷಕರನ್ನು ಗೌರವಿಬೇಕಾದುದ್ದು ವಿದ್ಯಾರ್ಥಿಗಳ ಜವಾಬ್ದಾರಿಯಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮದ ಮೂಲಕ ಪಾಠ ಮಾಡಿದ ಶಿಕ್ಷಕರನ್ನು ಗೌರವಿಸುತ್ತಿರುವುದು ಶ್ಲಾಘನೀಯ ಎಂದರು.

ಸರ್ಕಾರಿ ಶಾಲೆಗಳಲ್ಲಿ ಎಲ್ಲಾ ಸೌಲಭ್ಯಗಳು ದೊರೆಯುತ್ತದೆ. ಹಾಗಾಗಿ ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಸಾಧನೆ ಮಾಡಬೇಕು ಎಂದರು.

ADVERTISEMENT

ಹಳೆಯ ವಿದ್ಯಾರ್ಥಿ ಮಾರುತಿ, ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ಆಗಾಗ್ಗೆ ತಮ್ಮ ಶಾಲೆಗಳಿಗೆ ಭೇಟಿ ನೀಡಬೇಕು. ಇದರಿಂದ ಇತರೆ ವಿದ್ಯಾರ್ಥಿಗಳಿಗೆ ಸ್ಫೂರ್ತಿ ದೊರೆಯುತ್ತದೆ. ಹಳೆಯ ವಿದ್ಯಾರ್ಥಿಗಳ ಸಾಧನೆಯನ್ನು ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದರು.

ಕ್ಷೇತ್ರ ಶಿಕ್ಷಣಾದಿಕಾರಿ ಜಿ.ಗುರುಮೂರ್ತಿ, ಲೇಖಕರಾದ ರುಷಿ, ಶಿವಕುಮಾರ್ ಆರಾಧ್ಯ, ಮುಖಂಡರಾದ ಸಿದ್ದಾಪ್ಪಾಜಿ, ದತ್ತಗುರು, ಸಂತೋಷ್‌, ಸುಜಾತ, ಉಮಾ ಮಹೇಶ್‌ ಇದ್ದರು.

ಗುರುವಂದನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಆಕರ್ಷಕ ನೃತ್ಯ ಪ್ರದರ್ಶನ ನೀಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.