ಆನೇಕಲ್: ತಾಲ್ಲೂಕಿನ ಸೂರ್ಯಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಮುತ್ತಾನಲ್ಲೂರು ಗ್ರಾಮದಲ್ಲಿ ಶುಕ್ರವಾರ ರಾತ್ರಿ ಒಂದೇ ಊರಿನ ಎರಡು ದೇವಾಲಯಗಳಲ್ಲಿ ಕಳ್ಳರು ಬೀಗ ಮುರಿದು ದೇವಿಯ ಚಿನ್ನದ ತಾಳಿ ಸೇರಿದಂತೆ ಆಭರಣಗಳನ್ನು ಕಳವು ಮಾಡಿದ್ದಾರೆ.
ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮದ ರೇಣುಕಾ ಯಲ್ಲಮ್ಮ ದೇವಿ ಮತ್ತು ಬೆಟ್ಟದ ಯಲ್ಲಮ್ಮ ದೇವಿ ದೇವಾಲಯಗಳಲ್ಲಿ ಕಳ್ಳತನ ನಡೆದಿದೆ.
ರಾತ್ರಿ 2ರ ಸುಮಾರಿಗೆ ಕಳ್ಳರು ದೇವಾಲಯದ ಬೀಗ ಮುರಿದು ದೇವಿಯ ತಾಳಿ, ಬೆಳ್ಳಿಯ ಮುಖವಾಡ, ಹುಂಡಿ ಹಣ ಕಳವು ಮಾಡಿ ಪರಾರಿಯಾಗಿದ್ದಾರೆ. ಕಳವು ಮಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೂವರು ಮುಸುಕು ಧಾರಿಗಳು ದೇವಾಲಯದ ಬೀಗ ಹೊಡೆದು ಕಳವು ಮಾಡುತ್ತಿರುವುದು ಸೆರೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.