
ಪ್ರಜಾವಾಣಿ ವಾರ್ತೆ
ತೂಬಗೆರೆ(ದೊಡ್ಡಬಳ್ಳಾಪುರ): ತಾಲ್ಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಸೋಮವಾರ ರಾತ್ರಿ ಕಳ್ಳತನವಾಗಿದೆ.
ಮಂಗಳವಾರ ಬೆಳಗ್ಗೆ ದೇವಾಲಯದ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದ್ದು, ಕಳ್ಳರು ದೇವಾಲಯದಲ್ಲಿನ ಹುಂಡಿ ಹಾಗೂ ದೇವರ ವಿಗ್ರಹದ ಮೇಲಿನ ತಾಳಿ, ಇತರೆ ಆಭರಣಗಳನ್ನು ಕಳವು ಮಾಡಿರುವುದು ಗೊತ್ತಾಗಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕ ಭೇಟಿ ನೀಡಿದ ಪೊಲೀಸರು, ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.