
ಪ್ರಜಾವಾಣಿ ವಾರ್ತೆಆನೇಕಲ್: ತಾಲ್ಲೂಕಿನ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯ ಹರಪನಹಳ್ಳಿ ಕೆರೆ ಬಳಿಯಿರುವ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಬುಧವಾರ ರಾತ್ರಿ ಕಳ್ಳರು ದೇಗುಲದ ಬಾಗಿಲನ್ನು ಕಟರ್ ಮೂಲಕ ತುಂಡರಿಸಿ ದೇವರ ಮೇಲಿದ್ದ ಆಭರಣಗಳು ಮತ್ತು ಹುಂಡಿ ಹಣ ಕದ್ದು ಪರಾರಿಯಾಗಿದ್ದಾರೆ.
ಅಂದಾಜು ₹50ಸಾವಿರ ಹಣ ಹುಂಡಿಯಲ್ಲಿತ್ತು ಎನ್ನಲಾಗಿದೆ. ಜಿಗಣಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ದೇವಾಲಯದಲ್ಲಿ ಸಿಸಿಟಿವಿ ಕ್ಯಾಮೆರಾ ಇರಲಿಲ್ಲ. ಹೀಗಾಗಿ ಕಳ್ಳರ ಗುರುತು ಪತ್ತೆ ಹಚ್ಚಲು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಲಾಗುತ್ತಿದೆ ಎಂದು ಜಿಗಣಿ ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.