ಜೈಲು (ಪ್ರಾತಿನಿಧಿಕ ಚಿತ್ರ)
ಆನೇಕಲ್ : ವ್ಯಕ್ತಿಯೊಬ್ಬರ ಮೇಲೆ ಆ್ಯಸಿಡ್ ದಾಳಿ ಮಾಡಿದ್ದ ಅಪರಾಧಿಗೆ ಆನೇಕಲ್ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 10 ವರ್ಷ ಜೈಲು ಶಿಕ್ಷೆ ಮತ್ತು ₹10 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.
ಬಸಪ್ಪ ಶಿಕ್ಷೆಗೆ ಒಳಗಾದ ಅಪರಾಧಿ.
2019ರ ಡಿಸೆಂಬರ್ 18ರಂದು ಆನೇಕಲ್ ತಾಲ್ಲೂಕಿನ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಸಪ್ಪ ಆನಂದ.ಎಚ್.ಮೇಟಿ ಎಂಬುವವರ ಮುಖದ ಮೇಲೆ ಆಸಿಡ್ ಎರಚಿದ್ದರು. ಘಟನೆಗೆ ಸಂಬಂಧಿಸಿದಂತೆ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆನೇಕಲ್ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸೋಮಶೇಖರ್ ಅವರು ಬುಧವಾರ ಆರೋಪಿಗೆ 10 ವರ್ಷ ಜೈಲು ಮತ್ತು 10 ಲಕ್ಷ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಜಿ.ತಾರಾನಾಥ್ ಅವರು ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.