ಬಿಜೆಪಿ
ವಿಜಯಪುರ (ದೇವನಹಳ್ಳಿ): ಬಿಜೆಪಿಯಲ್ಲಿ ಕಾರ್ಯಕರ್ತರು ಇದ್ದಾರೆ. ಆದರೆ, ಅವರನ್ನು ಒಟ್ಟಾಗಿ ಕರೆದುಕೊಂಡು ಹೋಗುವ ನಾಯಕರ ಕೊರತೆ ಇದೆ ಎಂದು ಬಿಜೆಪಿ ನಾಯಕ ಸದಾನಂದಗೌಡ ಹೇಳಿದ್ದಾರೆ.
ಇಲ್ಲಿ ನಡೆದ ‘ಬಿಜೆಪಿ ಸಂಘಟನಾ ಪರ್ವ’ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಇದುವರೆಗೆ ನಾಯಕರಲ್ಲಿ ಕೆಲವು ಗೊಂದಲ, ಭಿನ್ನಾಭಿಪ್ರಾಯಗಳಿದ್ದವು. ಅದರ ಪರಿಣಾಮ ಕಾರ್ಯಕರ್ತರ ಮೇಲಾಗಿತ್ತು ಎಂದು ಹೇಳಿದರು.
ಈಗ ಬಿಜೆಪಿ ರಾಜ್ಯ ನಾಯಕರಿಗೆ ತಮ್ಮ ತಪ್ಪಿನ ಅರಿವಾಗಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ತೋರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.