ADVERTISEMENT

ಥ್ರೋ ಬಾಲ್ ಪಂದ್ಯಾವಳಿ: ಬೆಂಗಳೂರು ದಕ್ಷಿಣ, ರಾಮನಗರ, ಶಿವಮೊಗ್ಗಕ್ಕೆ ಜಯ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2024, 14:24 IST
Last Updated 29 ಡಿಸೆಂಬರ್ 2024, 14:24 IST
ದೇವನಹಳ್ಳಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ನಡೆದ ಬಾಲಕ ಮತ್ತು ಬಾಲಕಿಯರ ಬೆಂಗಳೂರು ವಿಭಾಗ ಮಟ್ಟದ ಥ್ರೋ ಬಾಲ್ ಪಂದ್ಯಾವಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ಷಣ
ದೇವನಹಳ್ಳಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ನಡೆದ ಬಾಲಕ ಮತ್ತು ಬಾಲಕಿಯರ ಬೆಂಗಳೂರು ವಿಭಾಗ ಮಟ್ಟದ ಥ್ರೋ ಬಾಲ್ ಪಂದ್ಯಾವಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ಷಣ   

ದೇವನಹಳ್ಳಿ: ಇಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ 4 ಹಾಗೂ 17 ವರ್ಷ ವಯೋಮಾನದ ಬಾಲಕ ಮತ್ತು ಬಾಲಕಿಯರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಬೆಂಗಳೂರು ದಕ್ಷಿಣ, ರಾಮನಗರ, ಶಿವಮೊಗ್ಗ ತಂಡ ಜಯ ಸಾಧಿಸಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಶನಿವಾರ ಆರಂಭವಾದ ಪಂದ್ಯಾವಳಿಯಲ್ಲಿ ಒಟ್ಟು 11 ಜಿಲ್ಲೆಯಿಂದ 44 ತಂಡದ 700 ಜನ ಕ್ರೀಡಾಪಟುಗಳು ಭಾಗವಹಿಸಿದ್ದರು.

ಹಿರಿಯ ಪ್ರಾಥಮಿಕ ಶಾಲೆಯ ಬಾಲಕ ವಿಭಾಗ: ಬೆಂಗಳೂರು ದಕ್ಷಿಣ(ಪ್ರ), ರಾಮನಗರ(ದ್ವಿ).

ADVERTISEMENT

ಬಾಲಕೀಯರ ವಿಭಾಗ: ರಾಮನಗರ(ಪ್ರ), ಬೆಂಗಳೂರು ದಕ್ಷಿಣ(ದ್ವಿ).

ಕಿರಿಯ ಪ್ರಾಥಮಿಕ ಶಾಲೆ ಬಾಲಕರ ವಿಭಾಗ: ಬೆಂಗಳೂರು ದಕ್ಷಿಣ(ಪ್ರ), ಶಿವಮೊಗ್ಗ(ದ್ವಿ).

ಬಾಲಕಿಯರ ವಿಭಾಗ: ಶಿವಮೊಗ್ಗ(ಪ್ರ), ತುಮಕೂರು(ದ್ವಿ).

ಕ್ರೀಡಾಕೂಟಕ್ಕೆ ಚಾಲನೆ

ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್‌.ಆರ್‌.ರವಿ ಕುಮಾರ್‌ ಕ್ರೀಡೆಯಲ್ಲಿ ಸೋಲು–ಗೆಲವನ್ನು ಸಮಾನವಾಗಿ ಸ್ವೀಕಾರ ಮಾಡಬೇಕು ಎಂದರು. ವಿಶ್ವದಲ್ಲಿಯೇ ಭಾರತ ಹೆಚ್ಚು ಯುವ ಸಮುದಾಯವನ್ನು ಹೊಂದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ವಿವಿಧ ಕ್ರೀಡೆಯಲ್ಲಿ ಕಠಿಣ ಪರಿಶ್ರಮದ ಮೂಲಕ ಪ್ರದರ್ಶನ ನೀಡಿದರೇ ಮುಂದೊಂದು ದಿನ ಒಲಂಪಿಕ್‌ನಲ್ಲಿ ಸಾಧಕರಾಗಿ ಗುರುತಿಸಿಕೊಳ್ಳಬಹುದು ಎಂದು ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬೈಲಾಂಜಿನಪ್ಪ ಜಿ.ಪಂ ಮಾಜಿ ಸದಸ್ಯ ಕೆ.ಸಿ.ಮಂಜುನಾಥ್‌ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಶ್ರೀನಿವಾಸ್ ಗೌಡ ಜಿಲ್ಲಾ ಶಿಕ್ಷಣಾಧಿಕಾರಿ ಹನುಮ ನಾಯಕ್ ಜಿಲ್ಲಾ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ರಮೇಶ್ ಮುಖಂಡರಾದ ಮಂಜುನಾಥ್ ತಾಲ್ಲೂಕು ದೈಹಿಕ ಶಿಕ್ಷಣ ಪರಿ ವೀಕ್ಷಕ ವೆಂಕಟೇಶ್ ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ ಜಿಲ್ಲಾ ಕೆಡಿಪಿ ಸದಸ್ಯ ಎಸ್.ಕೆ.ಕೋದಂಡರಾಮಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.