ADVERTISEMENT

ಇಂದು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಅಂತಿಮ ಮತದಾರರ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2025, 2:25 IST
Last Updated 13 ನವೆಂಬರ್ 2025, 2:25 IST
ದೊಡ್ಡಬಳ್ಳಾಪುರ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ
ದೊಡ್ಡಬಳ್ಳಾಪುರ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ   

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಹೊಸದಾಗಿ ರಚನೆಯಾದ ಪಟ್ಟಣ ಪಂಚಾಯಿತಿಗೆ ಐದು ವರ್ಷಗಳ ನಂತರ ಇದೇ ಪ್ರಥಮ ಬಾರಿಗೆ ಚುನಾವಣೆ ನಡೆಸುವ ಸಂಬಂಧ ಅಂತಿಮ ಮತದಾರರ ಪಟ್ಟಿ ನ.13 ರಂದು ಅಧಿಕೃತವಾಗಿ ಪ್ರಕಟವಾಗಲಿದೆ.

ರಾಜ್ಯ ಚುನಾವಣಾ ಆಯೋಗ 19 ವಾರ್ಡ್‌ಗಳ ವಿಗಂಡಣೆ ಮಾಡಿ ಈ ಹಿಂದೆಯೇ ಪ್ರಕಟಿಸಿತ್ತು. ವಾರ್ಡ್‌ ವಿಂಗಡಣೆ, ಮೀಸಲಾತಿ ಸೇರಿದಂತೆ ಎಲ್ಲಾ ವಿವಾದಗಳು ನ್ಯಾಯಾಲಯದಲ್ಲಿ ಇತ್ಯರ್ಥವಾದ ನಂತರ ಚುನಾವಣೆ ನಡೆಸಲು ಅಗತ್ಯ ಇರುವ ಎಲ್ಲಾ ಸಿದ್ಧತೆ ಅಂತಿಮಗೊಂಡಿವೆ.

ಚುನಾವಣೆಯ ದಿನಾಂಕ ಘೋಷಣೆಗೂ ಮುನ್ನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಬರುವ 19 ವಾರ್ಡ್‌ಗಳ ಭಾವಚಿತ್ರವಿರುವ ಕರಡು ಮತದಾರರ ಪಟ್ಟಿ ಅ.30 ರಂದು ಸಾರ್ವಜನಿಕವಾಗಿ ಪ್ರಚುರಪಡಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಮಾನ್ಯತೆ ಪಡೆದ ವಿವಿಧ ರಾಜಕೀಯ ಪಕ್ಷಗಳ ಸಭೆಯನ್ನು ನಡೆಸಿ ಮತದಾರರ ಅಂತಿಮ ಕರಡು ಪಟ್ಟಿಯನ್ನು ನೀಡಲಾಗಿತ್ತು.

ADVERTISEMENT

ಅಂತಿಮ ಮತದಾರರ ಪಟ್ಟಿ ಪ್ರಕಟಣೆಯಾದ ಕೆಲವೇ ದಿನಗಳಲ್ಲಿ ಮತದಾನದ ದಿನಾಂಕವು ಘೋಷಣೆಯಾಗಲಿದೆ ಎಂದು ಜಿಲ್ಲಾ ಚುನಾವಣಾ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.