ADVERTISEMENT

ರೈಲಿನ ಬ್ಯಾಟರಿ ಕಳವು; ಆರು ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 16 ಜುಲೈ 2020, 19:36 IST
Last Updated 16 ಜುಲೈ 2020, 19:36 IST

ಬೆಂಗಳೂರು: ರೈಲು ಬೋಗಿಗಳ ಬ್ಯಾಟರಿ ಕಳವು‌ ಮಾಡುತ್ತಿದ್ದ 6 ಆರೋಪಿಗಳನ್ನು ಆರ್‌ಪಿಎಫ್ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ ₹ 2.76 ಲಕ್ಷ ಮೌಲ್ಯದ 15 ಬ್ಯಾಟರಿಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನಗರದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

‘ಜುಲೈ 2ರಂದು ಗೊಲ್ಲಹಳ್ಳಿ ರೈಲು ನಿಲ್ದಾಣದಲ್ಲಿ ನಿಲ್ಲಿಸಿದ್ದ ಬೋಗಿಗಳ ಬ್ಯಾಟರಿಗಳನ್ನು ಆರೋಪಿಗಳು ಕಳವು ಮಾಡಿದ್ದರು. ಅದರ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅದನ್ನು ಆಧರಿಸಿ ಡಿ.ಜೆ.ಹಳ್ಳಿ ವ್ಯಾಪ್ತಿಯ ಇಸ್ಲಾಂಪುರದಲ್ಲಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಅವರು ನೀಡಿದ ಮಾಹಿತಿಯಂತೆ ಉಳಿದ ಆರೋಪಿಗಳನ್ನು ಸೆರೆಹಿಡಿಯಲಾಯಿತು’ ಎಂದು ಪೊಲೀಸರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.