ADVERTISEMENT

ಗಾಯಗೊಂಡ ಕಾಡೆಮ್ಮೆಗೆ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2020, 6:23 IST
Last Updated 20 ಆಗಸ್ಟ್ 2020, 6:23 IST
ಬನ್ನೇರುಘಟ್ಟ ಜೈವಿಕ ಉದ್ಯಾನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಡೆಮ್ಮೆ
ಬನ್ನೇರುಘಟ್ಟ ಜೈವಿಕ ಉದ್ಯಾನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾಡೆಮ್ಮೆ   

ಆನೇಕಲ್: ಕೋಡಿಹಳ್ಳಿ ಅರಣ್ಯ ವ್ಯಾಪ್ತಿಯಲ್ಲಿ ಗಾಯಗೊಂಡಿದ್ದ ಕಾಡೆಮ್ಮೆಯೊಂದನ್ನು ಬನ್ನೇರುಘಟ್ಟ ಜೈವಿಕ ಉದ್ಯಾನದ ಆಸ್ಪತ್ರೆಯ ವೈದ್ಯರ ತಂಡವು ಸಂರಕ್ಷಿಸಿ ಚಿಕಿತ್ಸೆ ನೀಡಿದ್ದಾರೆ.

ಆಗಸ್ಟ್‌ 17ರಂದು ಕೋಡಿಹಳ್ಳಿ ಸಮೀಪದ ಕೆರಳಾಲಾಸಂದ್ರ ಗ್ರಾಮದಲ್ಲಿ ಸುಮಾರು ಒಂದೂವರೆ ವರ್ಷದ ಕಾಡೆಮ್ಮೆಯೊಂದು ಗಾಯಗೊಂಡು ನಿಶ್ಯಕ್ತಿಯಿಂದ ಬಿದ್ದಿತ್ತು. ಸ್ಥಳೀಯ ರೈತರು ಗಮನಿಸಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಬನ್ನೇರುಘಟ್ಟ ಜೈವಿಕ ಉದ್ಯಾನದ ಆಸ್ಪತ್ರೆಯ ತಂಡವು ಅರಣ್ಯಾಧಿಕಾರಿಗಳ ನೆರವಿನೊಂದಿಗೆ ಕಾಡೆಮ್ಮೆಯನ್ನು ಸಂರಕ್ಷಿಸಿ ಬನ್ನೇರುಘಟ್ಟಕ್ಕೆ ತರಲಾಗಿದೆ. ಕಾಡೆಮ್ಮೆಯ ಮುಂಭಾಗದ ಬಲಗಾಲು ಮುರಿದುಹೋಗಿದ್ದು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಹೆಬ್ಬಾಳ ಪಶು ವೈದ್ಯಕೀಯ ಕಾಲೇಜಿನ ಉಪನ್ಯಾಸಕ ಪ್ರೊ.ನಾಗರಾಜು, ನಿವೃತ್ತ ರೀಡರ್‌ ಡಾ.ವಸಂತ್‌ ಶೆಟ್ಟಿ ಮತ್ತು ಉದ್ಯಾನದ ವೈದ್ಯ ಡಾ.ಉಮಾಶಂಕರ್‌ ನೇತೃತ್ವದಲ್ಲಿ ಚಿಕಿತ್ಸೆ ನಡೆಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT