ಹೊಸಕೋಟೆ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕಾಂಪೌಂಡ್ ಗೋಡೆಯನ್ನು ರಾತ್ರೋರಾತ್ರಿ ಕೆಡವಿರುವ ದುಷ್ಕರ್ಮಿಗಳು ಕಾಲೇಜು ಆವರಣದಲ್ಲಿದ್ದ ಮರಗಳನ್ನು ಕಡಿದು ಸಾಗಿಸಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ರಾಮಲಿಂಗಪ್ಪ ಟಿ. ಬೇಗೂರು ದೂರಿದರು.
ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಠಾಣೆಗೆ ದೂರು ನೀಡಲಾಗಿದೆ. ಪೊಲೀಸರು ಸ್ಥಳ ಮಹಜರು ನಡೆಸಿ ಪ್ರಕರಣ ದಾಖಲಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತನಿಖೆ ನಡೆಯುತ್ತಿದೆ ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗೇಟ್ ಮುಂಭಾಗ ಪಿಯು ಕಾಲೇಜು ಪಕ್ಕದ ರಸ್ತೆಯಲ್ಲಿ 20 ಅಡಿಯಷ್ಟು ಒತ್ತುವರಿ ಮಾಡಲಾಗಿದೆ. ಒತ್ತುವರಿದಾರರನ್ನು ಕಾಲೇಜು ಸಿಬ್ಬಂದಿ ವಿಚಾರಿಸಿದರೆ ಗದರಿಸುತ್ತಾರೆ ಎಂದು ಪ್ರಾಂಶುಪಾಲರು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.