ದೇವನಹಳ್ಳಿ: ದ್ವಿಚಕ್ರವಾಹನಕ್ಕೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯುವಕ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿರುವ ಘಟನೆ ಬುಧವಾರ ಬೆಳಿಗ್ಗೆ ಮಾಳಿಗೆನಹಳ್ಳಿ ಬಳಿ ನಡೆದಿದೆ.
ಬೆಂಗಳೂರು ಮೂಲದ ಅನನ್ಯ(17) ಹಾಗೂ ಕಿಶೋರ್ (20) ಮೃತಪಟ್ಟವರು. ಈ ಇಬ್ಬರು ನಂದಿಬೆಟ್ಟದ ಕಡೆಯಿಂದ ದ್ವಿಚಕ್ರವಾಹನದಲ್ಲಿ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.