ADVERTISEMENT

ದೊಡ್ಡಬಳ್ಳಾಪುರ | ಕಾರು ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 11 ಜನವರಿ 2026, 18:35 IST
Last Updated 11 ಜನವರಿ 2026, 18:35 IST
ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರನಾಳ ಕ್ರಾಸ್‌ ಬಳಿ ಭಾನುವಾರ ಸಂಜೆ ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ
ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರನಾಳ ಕ್ರಾಸ್‌ ಬಳಿ ಭಾನುವಾರ ಸಂಜೆ ಕಾರುಗಳ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ   

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ರಸ್ತೆಯ ಕಾರನಾಳ ಕ್ರಾಸ್‌ ಬಳಿ ಭಾನುವಾರ ಸಂಜೆ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕಾರಿನಲ್ಲಿದ್ದ ಕೆ.ಆರ್‌.ಪುರಂ ನಿವಾಸಿಗಳಾದ ಕಿಶೋರ್, ಶ್ರೀಧರ್ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಕೆ.ಆರ್.ಪುರಂನಿಂದ ನಂದಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಕಾರನಾಳ ಕ್ರಾಸ್‌ನಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿಯಾಗಿದೆ.

ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.