ದೊಡ್ಡಬಳ್ಳಾಪುರ: ಪ್ರತಿಭಟನೆ ಮಾಡುವ ಹಕ್ಕು ಇದೆ ಎಂದು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ ಎಂದು ಡಿವೈಎಸ್‌ಪಿ ಟಿ.ರಂಗಪ್ಪ ಹೇಳಿದರು.
ಡಿ.5 ರಂದು ವಿವಿಧ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಗುರುವಾರ ಕನ್ನಡ ಪರ, ರೈತ ಮತ್ತು ದಲಿತ ಸಂಘಟನೆಗಳ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಶಾಂತಿಯುತ ಬಂದ್‌ಗೆ ಇಲಾಖೆ ಸಹಕಾರ ಇದೆ. ಮಾನವೀಯ ನೆಲೆಯಲ್ಲಿ ಪ್ರತಿಭಟನೆ ಇರಬೇಕು. ಪ್ರತಿಭಟನಾ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆಗೆ ತೊಂದರೆಯುಂಟು ಮಾಡಿದರೆ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದರು.
ಸರ್ಕಲ್ ಇನ್‌ಸ್ಪೆಕ್ಟರ್ ಎಂ.ಬಿ.ನವೀನ್‌ಕುಮಾರ್, ಸಬ್‌ಇನ್‌ಸ್ಪೆಕ್ಟರ್ ಸೋಮಶೇಖರ್, ಮಂಜುನಾಥ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.