ADVERTISEMENT

ಅಸ್ಪೃಶ್ಯತೆ ಆಚರಣೆ ಜೀವಂತ: ವಿಷಾದ

ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2022, 6:18 IST
Last Updated 21 ಏಪ್ರಿಲ್ 2022, 6:18 IST
ದೇವನಹಳ್ಳಿ ಪ್ರವಾಸಿ ಮಂದಿರದಲ್ಲಿ ಪ್ರಜಾ ವಿಮೋಚನಾ ಬಹುಜನ ಸಮಿತಿಯಿಂದ ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು
ದೇವನಹಳ್ಳಿ ಪ್ರವಾಸಿ ಮಂದಿರದಲ್ಲಿ ಪ್ರಜಾ ವಿಮೋಚನಾ ಬಹುಜನ ಸಮಿತಿಯಿಂದ ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು   

ದೇವನಹಳ್ಳಿ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪ್ರಜಾ ವಿಮೋಚನಾ ಬಹುಜನ ಸಮಿತಿಯಿಂದ ಬುಧವಾರ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಜಯಂತಿ ಆಚರಿಸಲಾಯಿತು.

ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಂ ಮತ್ತು ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಿಜ್ಜವಾರ ನಾಗರಾಜ್‌ ಪುಷ್ಪನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ‘ಬಿಜ್ಜವಾರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನಾದರೂ ಮೇಲ್ವರ್ಗದ ಜನರಿಂದ ತುಳಿತಕ್ಕೆ ಒಳಗಾಗುತ್ತಿದ್ದೇನೆ. ಪ್ರಮುಖ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರೆ ಮೇಲ್ವರ್ಗದವರ ಬೀದಿಗೆ ಹೋಗುತ್ತೇವೆ ಎಂಬ ಕಾರಣಕ್ಕೆ ಶಿಷ್ಟಾಚಾರ ಉಲ್ಲಂಘಿಸಿ ಅವರೇ ಕಾರ್ಯಕ್ರಮ ಮಾಡುತ್ತಿದ್ದಾರೆ. ಆ ಮೂಲಕ ಅಸ್ಪೃಶ್ಯತೆಯ ಆಚರಣೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ADVERTISEMENT

‘ಸಮಿತಿಯಿಂದ ಪ್ರತಿ ತಾಲ್ಲೂಕಿನಿಂದ ಅಸ್ಪೃಶ್ಯ ಸಮುದಾಯದ ಇಬ್ಬರು ಮಕ್ಕಳನ್ನು ದತ್ತು ತೆಗೆದುಕೊಂಡು ಉನ್ನತ ವ್ಯಾಸಂಗಕ್ಕೆ ಆರ್ಥಿಕ ಸಹಾಯ ಮಾಡಲಾಗುವುದು. ಭ್ರಷ್ಟಾಚಾರದ ವಿರುದ್ಧ ನಿರಂತರವಾಗಿ ಹೋರಾಟ ಮಾಡಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಶ್ರಮಿಸಲಾಗುವುದು’ ಎಂದು ಹೇಳಿದರು.

‘ಸಮಿತಿಯ ಸದಸ್ಯರು ಮೃತಪಟ್ಟರೆ ಪಕ್ಷದಿಂದ ಅವರ ಕುಟುಂಬದವರಿಗೆ ₹ 10 ಸಾವಿರ ನೆರವು ನೀಡಲಾಗುವುದು’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪ್ರಜಾ ವಿಮೋಚನಾ ಬಹುಜನ ಸಮಿತಿಯ ರಾಜ್ಯ ಉಪಾಧ್ಯಕ್ಷ ಸಿಂಗ್ರಹಳ್ಳಿ ನರಸಿಂಹಯ್ಯ, ಪ್ರಧಾನ ಕಾರ್ಯದರ್ಶಿ ಚನ್ನಿಗರಾಯಪ್ಪ, ಮುಖಂಡರಾದ ಸುರೇಶ್‌, ಶ್ರೀನಿವಾಸ್‌, ಎಂ. ಮನೋಹರ್‌, ಲಕ್ಷ್ಮಮ್ಮ, ನಂಜೇಶ್‌, ಮುನಿರಾಜು, ಮನೀಂದ್ರಕುಮಾರ್‌, ರಮೇಶ್‌, ಸುರೇಶ್‌, ನಾಗರಾಜ್‌ ಹಾಗೂ ಮುಖಂಡರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.