ADVERTISEMENT

ನಬಾರ್ಡ್ ಬಾಕಿ ಹಣ ಬಿಡುಗಡೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2024, 16:08 IST
Last Updated 12 ಡಿಸೆಂಬರ್ 2024, 16:08 IST
ಕನಕಪುರ ರೈತ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚೀಲೂರು ಮುನಿರಾಜು ಮಾತನಾಡಿದರು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು
ಕನಕಪುರ ರೈತ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚೀಲೂರು ಮುನಿರಾಜು ಮಾತನಾಡಿದರು. ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು   

ಕನಕಪುರ: ‌ರಾಜ್ಯ ಸಹಕಾರ ಬ್ಯಾಂಕ್‌ಗಳ ಮೂಲಕ ರೈತರ ಕೃಷಿಗೆ ಅನುಕೂಲ ಆಗುವಂತೆ ಸಾಲ ನೀಡಲು ನಬಾರ್ಡ್ ಕೂಡಲೇ ಬಾಕಿ ಉಳಿಸಿಕೊಂಡಿರುವ ಹಣ ಬಿಡುಗಡೆ ಮಾಡಬೇಕು ಎಂದು ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಒತ್ತಾಯಿಸಿದರು.

ಕನಕಪುರ ರೈತ ಸಂಘದ ಕಚೇರಿಯಲ್ಲಿ ಗುರುವಾರ ನಡೆದ ರೈತ ಸಂಘದ ಸಭೆಯಲ್ಲಿ ಮಾತನಾಡಿದರು.

ರಾಜ್ಯಕ್ಕೆ ₹5,600ಕೋಟಿ ಸಾಲ ಕೊಡಬೇಕಿದೆ. ಆದರೆ,₹2,340ಕೋಟಿ ಬಿಡುಗಡೆ ಮಾಡಿದ್ದು ₹3,260 ಕೋಟಿ ಬಾಕಿ ಕೊಡಬೇಕಿದೆ. ಕೃಷಿ ಉತ್ತೇಜನಕ್ಕೆ ನಬಾರ್ಡ್ ಈ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿದರು.

ADVERTISEMENT

ರೈತರಿಗೆ ಸೊಸೈಟಿಗಳಲ್ಲಿ ಬಡ್ಡಿರಹಿತ ಸಾಲ ಸಿಗದಿದ್ದರೆ ಅನಿವಾರ್ಯವಾಗಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಬಡ್ಡಿಸಹಿತ ಸಾಲ ಪಡೆಯಬೇಕಾಗುತ್ತದೆ. ಇದರಿಂದ ರೈತರಿಗೆ ಬಡ್ಡಿ ಹೊರೆಯಾಗಿ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದ್ದಾರೆ ಎಂದರು. 

ಕೇಂದ್ರ ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಾರ್ಯದರ್ಶಿ ಕುಮಾರ್, ಸಂಘಟನಾ ಕಾರ್ಯದರ್ಶಿ ಶಿವರಾಜ್, ತಾಲ್ಲೂಕು ಅಧ್ಯಕ್ಷ ಕೋಡಿಹಳ್ಳಿ ಕುಮಾರ್, ಮುಖಂಡರಾದ ರಂಗಪ್ಪ, ಸಿದ್ದಮರಿಗೌಡ, ಲೋಕೇಶ್, ಸಿದ್ದರಾಜು ಕೆಂಪಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.