ದೇವನಹಳ್ಳಿ: ಉತ್ತರಾಖಂಡ್ ರಾಜ್ಯದ 6ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ರವಿಶಂಕರ್, ಸದಸ್ಯ ಜಂಗ್‌ಪಂಗಿ, ಎಂ.ಸಿ ಜೋಷಿ ಅವರ ನಿಯೋಗ ಅಧ್ಯಯನಕ್ಕಾಗಿ ಗುರುವಾರ ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಕಾರ್ಯವಿಧಾನದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿತು.
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎನ್ ಅನುರಾಧ, ಜಿಲ್ಲಾ, ತಾಲ್ಲೂಕು, ಗ್ರಾಮ ಹಂತ, ಕೂಸಿನ ಮನೆ, ನರೇಗಾ, ಇ-ಸ್ವತ್ತು, ಗ್ರಾಮಗಳ ಸ್ವಚ್ಛತಾ ಕಾರ್ಯ ಮತ್ತು ತ್ಯಾಜ್ಯ ವಿಲೇವಾರಿ ಘಟಕ, ಅರಿವು ಕೇಂದ್ರಗಳು (ಗ್ರಂಥಾಲಯ), ಅಮೃತ ಸರೋವರ ಯೋಜನೆಯಡಿ ಕೆರೆಗಳ ಪುನಶ್ಚೇತನ ಕಾರ್ಯ, ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನಗಳ ಬಗ್ಗೆ ಮಾಹಿತಿ ನೀಡಿದರು.
ದೇವನಹಳ್ಳಿ ತಾಲ್ಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಸೇವೆಯ ಮಾಹಿತಿ ಪಡೆದು, ಘನತ್ಯಾಜ್ಯ ವಿಲೇವಾರಿ ಘಟಕ, ಅರಿವು ಕೇಂದ್ರ, ಕೂಸಿನ ಮನೆಗೆ ಭೇಟಿ ನೀಡಿದರು. ದೊಡ್ಡಬಳ್ಳಾಪುರ ನಗರಸಭೆಗೆ ಭೇಟಿ ನೀಡಿ ಆಡಳಿತ ವೈಖರಿ, ಕಾರ್ಯವಿಧಾನ, ಆದಾಯ ವಿಧಾನ, ತೆರಿಗೆ, ಕ್ರಿಯಾ ಯೋಜನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶಿವಕುಮಾರ್, ಯೋಜನಾ ನಿರ್ದೇಶಕ ವಿಠ್ಠಲ ಕಾವ್ಳೆ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ಮುಖ್ಯ ಲೆಕ್ಕಾಧಿಕಾರಿ ಮಂಜುನಾಥ, ನಗರಸಭೆ ಅಧ್ಯಕ್ಷೆ ಸುಮಿತ್ರ, ಉಪಾಧ್ಯಕ್ಷ ಮಲ್ಲೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.