ADVERTISEMENT

ದೊಡ್ಡಬಳ್ಳಾಪುರ ತಾಲ್ಲೂಕು: ವೈಕುಂಠ ಏಕಾದಶಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2018, 12:57 IST
Last Updated 18 ಡಿಸೆಂಬರ್ 2018, 12:57 IST
ದೊಡ್ಡಬಳ್ಳಾಪುರದ ಕೆರೆಬಾಗಿಲು ರಸ್ತೆಯಲ್ಲಿರುವ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ  ಸ್ವಾಮಿಯ ಉಯ್ಯಾಲೆಯ ವಿಶೇಷ ಅಲಂಕಾರ ಮಾಡಲಾಗಿತ್ತು
ದೊಡ್ಡಬಳ್ಳಾಪುರದ ಕೆರೆಬಾಗಿಲು ರಸ್ತೆಯಲ್ಲಿರುವ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ  ಸ್ವಾಮಿಯ ಉಯ್ಯಾಲೆಯ ವಿಶೇಷ ಅಲಂಕಾರ ಮಾಡಲಾಗಿತ್ತು   

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ವೆಂಕಟರಮಣಸ್ವಾಮಿ, ರಂಗನಾಥಸ್ವಾಮಿ, ವೇಣುಗೋಪಾಲ ಸ್ವಾಮಿ ದೇವಾಲಯಗಳಲ್ಲಿ ಮಂಗಳವಾರ ವೈಕುಂಠ ಏಕಾದಶಿಯ ಅಂಗವಾಗಿ ಸಹಸ್ರಾರು ಜನ ಭಕ್ತಾದಿಗಳು ದರ್ಶನ ಪಡೆದರು.

ಭಕ್ತಾದಿಗಳು ಉತ್ತರಾಭಿಮುಖದ ವೈಕುಂಠ ದ್ವಾರದ ಮೂಲಕ ಹಾದು ದರ್ಶನ ಪಡೆದರು. ತೇರಿನಬೀದಿಯ ಶ್ರೀಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜೆ ಹಮ್ಮಿಕೊಳ್ಳಲಾಗಿತ್ತು. ಇಡೀ ದೇವಾಲಯವನ್ನು ವಿಶೇಷವಾಗಿ ಸಿಂಗರಿಸಲಾಗಿತ್ತು. ಬೆಳಗಿನ ಜಾವದಿಂದಲೇ ಸಹಸ್ರಾರು ಭಕ್ತಾದಿಗಳು ದೇವಾಲಯದ ಮುಂದಿನ ರಸ್ತೆಯಲ್ಲಿ ಸಾಲುಗಟ್ಟಿ ನಿಂತಿದ್ದರು.

ಕೆರೆಬಾಗಿಲು ರಸ್ತೆಯಲ್ಲಿರುವ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಉಯ್ಯಾಲೆ ವಿಶೇಷ ಅಲಂಕಾರ, ನಗರದ ಕುಚ್ಚಪ್ಪನಪೇಟೆಯಲ್ಲಿರುವ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯ ರಂಗಪ್ಪ ಸರ್ಕಲ್ ಬಳಿಯಿರುವ ಶಿರಡಿ ಸಾಯಿಬಾಬಾ ಮಂದಿರದಲ್ಲಿ, ನಗರದ ವೆಂಕಟರಮಣ ಸ್ವಾಮಿ, ಜನಾರ್ಧನಸ್ವಾಮಿ, ನರಸಿಂಹಸ್ವಾಮಿ ದೇವಾಲಯಗಳಲ್ಲಿ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮ ಜರುಗಿದವು.

ADVERTISEMENT

ತಾಲ್ಲೂಕಿನ ಕಾಡನೂರು ಗ್ರಾಮದಲ್ಲಿರುವ ಚನ್ನಕೇಶವ ದೇವಾಲಯದಲ್ಲಿ ವೈಕುಂಠ ಏಕಾದಶಿ ಅಂಗವಾಗಿ ವಿಶೇಷ ಭಜನಾ ಕಾರ್ಯಕ್ರಮ ನಡೆಯಿತು.

ತಾಲೂಕಿನ ತೂಬಗೆರೆಯ ಪುರಾತನ ಪ್ರಸಿದ್ದ ಪ್ರಸನ್ನ ಲಕ್ಷ್ಮಿವೆಂಕಟರಮಣಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.