ಆನೇಕಲ್: ತಾಲ್ಲೂಕಿನ ವಿವಿಧ ದೇವಿ ದೇವಾಲಯಗಳಲ್ಲಿ ವಿಜಯದಶಮಿ ಪ್ರಯಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಪಟ್ಟಣದ ವಿವಿಧ ದೇವಾಲಯಗಳಲ್ಲಿ ನವರಾತ್ರಿಯನ್ನು ವೈಭವದಿಂದ ಆಚರಿಸಲಾಗುತ್ತಿದೆ.
ಕಾಳಿಕ ಕಮಟೇಶ್ವರ ದೇವಿ ದೇವಾಲಯದಲ್ಲಿ ನವರಾತ್ರಿ ಪ್ರಯುಕ್ತ ಸೆ.22ರಿಂದಲೂ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತಾಲ್ಲೂಕಿನ ದೊಡ್ಡಹಾಗಡೆ ಚೌಡೇಶ್ವರಿ ದೇವಿ ದೇವಾಲಯದಲ್ಲಿ ಕಳೆದ ಎಂಟು ದಿನಗಳಿಂದ ನವರಾತ್ರಿಯನ್ನು ವೈಭವದಿಂದ ಆಚರಿಸಲಾಗುತ್ತಿದೆ. ಸೋಮವಾರ ದೇವಿಗೆ ಸರಸ್ವತಿ ಅಲಂಕಾರ ಮಾಡಲಾಗಿತ್ತು. ತಾಲ್ಲೂಕಿನ ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯ, ರಾಚಮಾನಹಳ್ಳಿ ಅನ್ನಪೂರ್ಣೇಶ್ವರಿ ದೇವಾಲಯ, ಮಂಚನಹಳ್ಳಿ ಯಲ್ಲಮ್ಮ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ನವರಾತ್ರಿ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಹೆಚ್ಚಿದ ವಾಹನ ದಟ್ಟಣೆ: ತಾಲ್ಲೂಕಿನಾದ್ಯಂತ ದಸರಾ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು. ಪಟ್ಟಣದಲ್ಲಿ ದಸರಾ ಹಬ್ಬದ ಸಾಮಗ್ರಿಗಳನ್ನು ಖರೀದಿಗೆ ಜನರು ಮುಗಿ ಬಿದ್ದರು.
ಚಂದಾಪುರ ಪುರಸಭೆ, ಹೆಬ್ಬಗೋಡಿ ನಗರಸಭೆ ಸೇರಿದಂತೆ ಹಲವೆಡೆ ಸ್ಥಳೀಯ ಸಂಸ್ಥೆಗಳ ವಾಹನಗಳಿಗೆ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಕಂಡು ಬಂದಿತು. ಚಂದಾಪುರದಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು. ಬೆಲೆ ಏರಿಕೆ ನಡುವೆಯೂ ಹಬ್ಬದ ಸಂಭ್ರಮ ಮನೆ ಮಾಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.