
ವಿಜಯಪುರ (ದೇವನಹಳ್ಳಿ): ಹಾರೋಹಳ್ಳಿ ಗ್ರಾಮ ಪಂಚಾಯಿತಿಯು ವಿವಿಧ ಜನಪರ, ಅಭಿವೃದ್ಧಿ ಪರ ಕೆಲಸ ಕಾರ್ಯಗಳನ್ನು ಕೈಗೊಂಡು ಜಿಲ್ಲೆಗೆ ಮಾದರಿ ಪಂಚಾಯಿತಿಯಾಗಿ ರೂಪುಗೊಳ್ಳಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ವಿಜಯಪುರ ಹೋಬಳಿಯ ಹಾರೋಹಳ್ಳಿ ಗ್ರಾಮದಲ್ಲಿ ₹60 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಗ್ರಾಮ ಪಂಚಾಯಿತಿ ನೂತನ ಕಟ್ಟಡದ ಉದ್ಘಾಟಿಸಿ ಮಾತನಾಡಿ, ಗ್ರಾಮ ಪಂಚಾಯಿತಿಗಳು ಮಾದರಿ ಕಟ್ಟಡ ಹೊಂದುವ ಜತೆಗೆ ಸರ್ಕಾರದ ಜನಪರ ಯೋಜನೆಗಳು ಹಾಗೂ ಸರ್ಕಾರದ-ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಬೇಕು ಎಂದರು.
ಗ್ರಾಮ ಮಟ್ಟದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡಬೇಕು. ನಿವೇಶನ, ವಸತಿ ರಹಿತರಿಗೆ ಸೌಲಭ್ಯ ಒದಗಿಸುವುದರ ಜೊತೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು ಎಂದರು.
ಹಾರೋಹಳ್ಳಿ ಗ್ರಾಮದ ಮುಖಂಡ ರಘು, ಹಾರೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಾದೇವಿ ಮಂಜುನಾಥ್ ಮಾತನಾಡಿದರು.
ಜಿ. ಪಂ ಉಪಕಾರ್ಯದರ್ಶಿ ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಇಒ ಸಿ.ಎಸ್ ಶ್ರೀನಾಥ್ ಗೌಡ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ರಾಜಣ್ಣ, ಬಯಪ ಅಧ್ಯಕ್ಷ ವಿ. ಶಾಂತಕುಮಾರ್, ದೇವನಹಳ್ಳಿ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸಿ.ಜಗನ್ನಾಥ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನರಸಮ್ಮ ಪೂಜಪ್ಪ, ಬಮೂಲ್ ನಿರ್ದೇಶಕ ಎಸ್.ಪಿ ಮುನಿರಾಜು, ಕೆಪಿಸಿಸಿ ಸದಸ್ಯ ಚಿನ್ನಪ್ಪ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ ಮಂಜುನಾಥ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಪಿಡಿಓ ಎಸ್.ಎಂ.ಡಿ ಇಸಾಕ್, ಕಾರ್ಯದರ್ಶಿ ರಾಜೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.