ADVERTISEMENT

ಬೇಕರಿಗಳ ಮೇಲೆ ದಾಳಿ; ₹ 4 ಸಾವಿರ ದಂಡ ವಸೂಲಿ

ವಿಜಯಪುರ: ಐದು ಬೇಕರಿಗಳಿಂದ 20 ಕೆ.ಜಿ ಪ್ಲಾಸ್ಟಿಕ್‌ ವಶ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2024, 14:30 IST
Last Updated 30 ಏಪ್ರಿಲ್ 2024, 14:30 IST
ವಿಜಯಪುರ ಪಟ್ಟಣದ ದೇವನಹಳ್ಳಿ ರಸ್ತೆಯಲ್ಲಿರುವ ಬೇಕರಿಯೊಂದರ ಮೇಲೆ ದಾಳಿ ನಡೆಸಿದ ಪುರಸಭೆ ಸಿಬ್ಬಂದಿ ಪ್ಲಾಸ್ಟಿಕ್ ಕವರುಗಳನ್ನು ವಶಪಡಿಸಿಕೊಂಡರು.
ವಿಜಯಪುರ ಪಟ್ಟಣದ ದೇವನಹಳ್ಳಿ ರಸ್ತೆಯಲ್ಲಿರುವ ಬೇಕರಿಯೊಂದರ ಮೇಲೆ ದಾಳಿ ನಡೆಸಿದ ಪುರಸಭೆ ಸಿಬ್ಬಂದಿ ಪ್ಲಾಸ್ಟಿಕ್ ಕವರುಗಳನ್ನು ವಶಪಡಿಸಿಕೊಂಡರು.   

ವಿಜಯಪುರ (ದೇವನಹಳ್ಳಿ): ಪಟ್ಟಣದ ಹಲವು ಬೇಕರಿಗಳ ಮೇಲೆ ಸೋಮವಾರ ದಾಳಿ ನಡೆಸಿದ ಪುರಸಭೆಯ ಆರೋಗ್ಯ ನಿರೀಕ್ಷಕಿ ಲಾವಣ್ಯ ಅವರು, 20 ಕೆ.ಜಿ. ಪ್ಲಾಸ್ಟಿಕ್ ಕವರ್‌ ವಶಪಡಿಸಿಕೊಂಡು, ₹4 ಸಾವಿರ ದಂಡ ವಸೂಲಿ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಪ್ಲಾಸ್ಟಿಕ್ ಕವರ್‌ ಬಳಕೆ ಮಾಡದಂತೆ ಹಲವಾರು ಬಾರಿ ಎಚ್ಚರಿಕೆ ನೀಡಿದ್ದರು ಸಹ ಬೇಕರಿಗಳಲ್ಲಿ ಪ್ಲಾಸ್ಟಿಕ್‌ ಬಳಸಲಾಗುತ್ತಿದೆ. ಹೀಗಾಗಿ ಐದು ಬೇಕರಿಗಳ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್‌ ವಶಪಡಿಸಿಕೊಂಡು ಬೇಕರಿ ಮಾಲೀಕರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದರು.

ನಿಷೇಧಿತ ಪ್ಲಾಸ್ಟಿಕ್‌ ಬಳಸುತ್ತಿರುವ ಹೊಟೇಲ್, ದಿನಸಿ ಅಂಗಡಿ, ತರಕಾರಿ–ಹಣ್ಣು, ಸೇರಿದಂತೆ ಎಲ್ಲಾ ಅಂಗಡಿಗಳಲ್ಲಿ ದಾಳಿ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.