ADVERTISEMENT

ವಿಜಯಪುರ: ಎಲ್ಲೆಂದರಲ್ಲೇ ರಾರಾಜಿಸುತ್ತಿರುವ ಕಸದ ರಾಶಿ

​ಪ್ರಜಾವಾಣಿ ವಾರ್ತೆ
Published 3 ಜೂನ್ 2023, 14:30 IST
Last Updated 3 ಜೂನ್ 2023, 14:30 IST
ವಿಜಯಪುರ ಪಟ್ಟಣದ ದೊಡ್ಡಮೋರಿಯ ಬಳಿಯ ಕಸದ ರಾಶಿ 
ವಿಜಯಪುರ ಪಟ್ಟಣದ ದೊಡ್ಡಮೋರಿಯ ಬಳಿಯ ಕಸದ ರಾಶಿ    

ವಿಜಯಪುರ(ದೇವನಹಳ್ಳಿ): ಪರಿಸರ ದಿನಾಚರಣೆ ಅಂಗವಾಗಿ ಪುರಸಭೆ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಪರಿಸರ ನೈರ್ಮಲ್ಯ ಜಾಗೃತಿ ಆಂದೋಲನ ಹಾಗೂ ಅಭಿಯಾನಗಳನ್ನು ಮಾಡುತ್ತಿದ್ದರೆ, ಮತ್ತೊಂದೆಡೆ ಎಲ್ಲೆದರಲ್ಲೇ ಕಸದ ರಾಶಿಗಳು ರಾಜಾಜಿಸುತ್ತಾ ಪರಿಸರ ನೈರ್ಮಲ್ಯವನ್ನು ನಾಶ ಮಾಡುತ್ತಿದೆ.

ಪುರಸಭೆಯ ಆದೇಶವನ್ನು ಉಲ್ಲಂಘನೆ ಮಾಡಿರುವ ವ್ಯಾಪಾರಿಗಳು ಮತ್ತು ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲೇ ಸುರಿಯುತ್ತಿದ್ದಾರೆ. ಹಾಗಾಗಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುತ್ತಿರುವುದು ವ್ಯರ್ಥವಾಗಿದೆ.

ಪ್ಲಾಸ್ಟಿಕ್ ಬಳಕೆ ನಿಷೇಧದ ನಿಯಮವು ಪ್ರವಾಸಿ ತಾಣಗಳಲ್ಲಿ ಸ್ವಲ್ಪಮಟ್ಟಿಗೆ ಅನುಷ್ಟಾನದಲ್ಲಿರುವುದು ಸಮಾಧಾನಕರವಾದ ಸಂಗತಿ. ಆದರೆ, ಉಳಿದ ಕಡೆಗಳಲ್ಲಿ ನಿಯಮ ಉಲ್ಲಂಘನೆಯಾಗುತ್ತಿದ್ದು, ಕ್ರಮಕೈಗೊಳ್ಳಬೇಕಾದ ಪುರಸಭೆಯ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ.

ADVERTISEMENT
ಈಗಾಗಲೇ ಜನರಿಗೆ ಪ್ಲಾಸ್ಟಿಕ್ ಬದಲಿಗೆ ಬಟ್ಟೆ ಬ್ಯಾಗ್‌ ಬಳಕೆ ಮಾಡಲು ಸೂಚಿಸಲಾಗಿದೆ. ಜೊತೆಗೆ ಎಲ್ಲೆಂದರಲ್ಲಿ ಕಸ ಎಸೆಯಬಾರದೆಂದು ಎಚ್ಚರಿಕೆ ನೀಡಲಾಗಿದೆ. ಆದರೂ ಜನರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳಲಾಗುವುದು
ವಿ.ಮೋಹನ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ

ಪ್ಲಾಸ್ಟಿಕ್ ಉತ್ಪಾದನೆ ನಿಲ್ಲಿಸಿದರೆ, ಬಳಕೆ ತಾನಾಗಿಯೇ ನಿಲ್ಲುತ್ತದೆ. ನಾವು ಪ್ಲಾಸ್ಟಿಕ್ ಕವರು ನೀಡದಿದ್ದರೆ ಗ್ರಾಹಕರು ಬರುವುದಿಲ್ಲ. ಆದರೆ, ಅಧಿಕಾರಿಗಳು ಮಾರಾಟ ಮಾಡುವವರಿಂದ ಪ್ಲಾಸ್ಟಿಕ್ ವಶಪಡಿಸಿಕೊಂಡು ಅವರಿಗೆ ದಂಡ ವಿಧಿಸುತ್ತಾರೆ. ಉತ್ಪಾದಕರಿಗೆ ಯಾವುದೇ ರೀತಿಯ ದಂಡ ವಿಧಿಸುತ್ತಿಲ್ಲ ಎಂದು ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಪುರಸಭೆಯಿಂದ ಅಂಗಡಿಗಳ ಮಾಲೀಕರು, ಬೀದಿಬದಿ ವ್ಯಾಪಾರಿಗಳು ಸೇರಿದಂತೆ ಎಲ್ಲರಿಗೂ ಸಭೆ ನಡೆಸಿ, ಪ್ಲಾಸ್ಟಿಕ್ ಬಳಕೆ ಮಾಡದಂತೆ ಮನವರಿಕೆ ಮಾಡಿಕೊಡಲಾಗಿದೆ. ಆದರೂ ವ್ಯಾಪಾರಿಗಳು ಪ್ಲಾಸ್ಟಿಕ್‌ ಅನ್ನೇ ಬಳಸುತ್ತಿದ್ದಾರೆ. ಹಸಿ ಮತ್ತು ಒಣ ಕಸ ವಿಂಗಡಿಸಿ ಎಂದು ಹೇಳಿರುವುದು ಪ್ರಯೋಜನವಿಲ್ಲ. ಎಲ್ಲೆಲ್ಲೂ ಪ್ಲಾಸ್ಟಿಕ್‌ ಕವರ್‌ಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಪರಿಸರದಲ್ಲಿ ವಾತಾವರಣ ಮಾಲಿನ್ಯವಾಗುತ್ತಿದ್ದು, ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದು ಪರಿಸರ ಪ್ರೇಮಿ ರಘುನಂದನ್ ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಜನರಿಗೆ ಪ್ಲಾಸ್ಟಿಕ್ ಬದಲಿಗೆ ಬಟ್ಟೆ ಬ್ಯಾಗ್‌ ಬಳಕೆ ಮಾಡಲು ಸೂಚಿಸಲಾಗಿದೆ. ಜೊತೆಗೆ ಎಲ್ಲೆಂದರಲ್ಲಿ ಕಸ ಎಸೆಯಬಾರದೆಂದು ಎಚ್ಚರಿಕೆ ನೀಡಲಾಗಿದೆ. ಆದರೂ ಜನರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ಕುರಿತು ಕ್ರಮ ಕೈಗೊಳ್ಳಲಾಗುವುದು ವಿ.ಮೋಹನ್ ಕುಮಾರ್ ಪುರಸಭೆ ಮುಖ್ಯಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.