ವಿಜಯಪುರ (ದೇವನಹಳ್ಳಿ): ಪಟ್ಟಣದ ಬಿಎಂಎಸ್ ಸಮುದಾಯ ಭವನದಲ್ಲಿ ಶುಕ್ರವಾರ ಮಧ್ಯಾಹ್ನ ವಿನಾಯಕ ಕೃಪಾ ಪೋಷಿತ ನಾಟಕ ಮಂಡಳಿ ವತಿಯಿಂದ ‘ಕುರುಕ್ಷೇತ್ರ’ ಕನ್ನಡ ಪೌರಾಣಿಕ ನಾಟಕ ಪ್ರದರ್ಶನವಾಯಿತು.
ಈ ವೇಳೆ ಸಂಗೀತ ನಿರ್ದೇಶಕ ಹನುಮಂತ ರಾಜ್ ಮಾತನಾಡಿ, ನಾಟಕಗಳಲ್ಲಿ ಬರುವ ಪ್ರತಿಯೊಂದು ಸನ್ನಿವೇಶವೂ ನಮ್ಮ ಜೀವನಕ್ಕೆ ಹತ್ತಿರವಾಗಿದೆ. ರಂಗಕಲೆಯನ್ನು ಇನ್ನು ಜೀವಂತವಾಗಿಟ್ಟುಕೊಂಡು ಮುಂದಿನ ಪೀಳಿಗೆಗೆ ಕೊಡುಗೆ ನೀಡಲು ರಂಗ ಕಲಾವಿದರು ಶ್ರಮಿಸುತ್ತಿರುವುದು ಉತ್ತಮ ಬೆಳೆವಣಿಗೆ. ನಾಟಕಗಳನ್ನು ಪ್ರೋತ್ಸಾಹಿಸುವಂತಹ ಕೆಲಸವಾಗಬೇಕು ಎಂದು ಹೇಳಿದರು.
ಕಲಾವಿದ ಮೋಹನ್ ಬಾಬು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ನಾಟಕಗಳು ಪ್ರದರ್ಶನಗೊಳ್ಳುತ್ತಿರುವುದು ಸಂತೋಷದ ವಿಚಾರ. ನಶಿಸಿ ಹೋಗುತ್ತಿರುವ ರಂಗ ಕಲೆಯನ್ನು ಉಳಿಸಿ ಬೆಳೆಸಬೇಕಿದೆ. ಇಂತಹ ಕಾರ್ಯಗಳಿಗೆ ಸಾರ್ವಜನಿಕರು ಸಹಾಯಹಸ್ತ ನೀಡಬೇಕು ಎಂದರು.
ಹಿರಿಯ ರಂಗ ಕಲಾವಿದರು, ಸಾರ್ವಜನಿಕರು ನಾಟಕ ವೀಕ್ಷಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.