
ವಿಜಯಪುರ(ದೇವನಹಳ್ಳಿ): ಪಟ್ಟಣದಿಂದ ಚಿಕ್ಕಬಳ್ಳಾಪುರ ರಸ್ತೆಯಲ್ಲಿರುವ ಅಮಾನಿಕೆರೆಯ ಏರಿಯ ಮೇಲಿಂದ ಸೋಮವಾರ ಸರಕು ಸಾಗಾಣಿಕೆ ಆಟೊಯೊಂದು ಉರುಳಿಬಿದ್ದು ಚಾಲಕನಿಗೆ ಕಾಲು ಮುರಿದಿದ್ದು, ಆಟೊದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೋಲಾರ ಜಿಲ್ಲೆಯ ಆವಣಿ ಗ್ರಾಮದ ಹತ್ತು ಮಂದಿ ಸರಕು ಸಾಗಾಣಿಕೆಯ ಆಟೊದಲ್ಲಿ ಚಿಕ್ಕಬಳ್ಳಾಪುರದ ಈಶಾ ಕೇಂದ್ರಕ್ಕೆ ಹೋಗಿ ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೊ ಉರುಳಿ, ವಿದ್ಯುತ್ ಪರಿವರ್ತಕ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಕಂಬವು ಉರುಳಿ ಬಿದ್ದಿದೆ. ಆಟೊ ಕಂಬಕ್ಕೆ ಡಿಕ್ಕಿ ಹೊಡೆದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡಿದ್ದ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮಂಗಳವಾರ ಬೆಳಿಗ್ಗೆ ಪುರಸಭೆಯ ಅಧಿಕಾರಿಗಳು, ಬೆಸ್ಕಾಂ ಇಲಾಖೆಯ ಸಿಬ್ಬಂದಿಯೊಂದಿಗೆ ವಿದ್ಯುತ್ ಪರಿವರ್ತಕ ಸರಿಪಡಿಸಿದ್ದಾರೆ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.