ವಿಜಯಪುರ (ದೇವನಹಳ್ಳಿ): ವಿಜಯಪುರ ಪಟ್ಟಣ ಹಾಗೂ ಹೋಬಳಿಯಾದ್ಯಂತ ಎರಡು ದಿನಗಳಿಂದ ತುಂತುರು ಮಳೆಯಾಗುತ್ತಿದೆ. ಭಾನುವಾರ ಸಂಜೆಯೂ ಉತ್ತಮ ಮಳೆ ಸುರಿದಿದೆ.
ಮಳೆ ರೈತರಲ್ಲಿ ಸಂತಸ ತಂದಿದೆ. ಮುಂಗಾರು ಬಿತ್ತನೆಗೆ ಭೂಮಿ ಹದ ಮಾಡಲು ಮಳೆ ಅನುಕೂಲ ಮಾಡಿಕೊಟ್ಟಿದೆ ಎಂದು ರೈತರು ಹರ್ಷ ವ್ಯಕ್ತಪಡಿಸಿದ್ದಾರೆ. ನಿರಂತರ ಮಳೆಯಿಂದ ಹೂವಿನ ಇಳುವರಿ, ಗುಣಮಟ್ಟ ಕುಸಿಯುವ ಆತಂಕವನ್ನು ಹೂ ಬೆಳೆಗಾರರು ಎದುರಿಸುತ್ತಿದ್ದಾರೆ.
ತುಂತುರು ಮಳೆಯಿಂದಾಗಿ ಜನರು ರೈನ್‍ಕೋಟ್ ಧರಿಸಿ, ಛತ್ರಿ ಹಿಡಿದು ಸಾಗುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂತು. ದ್ವಿಚಕ್ರ ವಾಹನ ಸವಾರರು, ಪಾದಚಾರಿಗಳು ಸಮಸ್ಯೆ ಅನುಭವಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.