ವಿಜಯಪುರ (ದೇವನಹಳ್ಳಿ): ಇಲ್ಲಿನ ರಾಜಸ್ವ ನಿರೀಕ್ಷಕರ ಕಚೇರಿ ಹಾಗೂ ಉಪ ತಹಶೀಲ್ದಾರ್ ಕಾರ್ಯಾಲಯದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಸಾರ್ವಜನಿಕರು ಆರೋಪ ಮಾಡಿದ್ದಾರೆ.
ಕೆಲವು ತಿಂಗಳ ಹಿಂದೆ ಜಮೀನಿನ ಪೌತಿ ಖಾತೆ ಮಾಡಿಕೊಡಲು ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಆದರೂ ಅಧಿಕಾರಿಗಳು ಮತ್ತು ಸಿಬ್ಬಂದಿ ಎಚ್ಚೆತ್ತುಕೊಂಡಿಲ್ಲ. ಸಾರ್ವಜನಿಕರನ್ನು ಅನಗತ್ಯವಾಗಿ ಅಲೆದಾಡಿಸುತ್ತಾರೆ ಎಂದು ಸ್ಥಳೀಯರು ದೂರಿದ್ದಾರೆ.
ಸಕಾಲ ಸೇವೆ ಮರೀಚಿಕೆ: ಕಚೇರಿಯಲ್ಲಿ ನಿಗದಿತ ಸಮಯಕ್ಕೆ ಯಾವೊಬ್ಬ ಅಧಿಕಾರಿ, ಸಿಬ್ಬಂದಿ ಬರುತ್ತಿಲ್ಲ. ಸಂಜೆ ನಿಗದಿತ ಸಮಯಕ್ಕೂ ಮುನ್ನವೇ ಕಚೇರಿಯಿಂದ ತೆರಳುತ್ತಾರೆ. ಸಿಬ್ಬಂದಿ ಯಾವಾಗ ಕಚೇರಿಗೆ ಬರುತ್ತಾರೆ ಮತ್ತು ಹೋಗುತ್ತಾರೆ ಎಂಬ ಮಾಹಿತಿ ಜನರಿಗೆ ಇರುವುದಿಲ್ಲ. ಇಡೀ ದಿನ ಸಿಬ್ಬಂದಿಗಾಗಿ ಜನರು ಕಾಯುತ್ತ ಕೂರಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಇದನ್ನೇ ಬಂಡವಾಳ ಮಾಡಿಕೊಂಡ ಕಚೇರಿಯ ಗ್ರಾಮ ಸಹಾಯಕರು, ಮಧ್ಯವರ್ತಿಗಳು ಜನರನ್ನು ಶೋಷಣೆ ಮಾಡುತ್ತಿದ್ದಾರೆ ಎಂದು ಕಚೇರಿಗೆ ಕೆಲಸಕ್ಕಾಗಿ ಬಂದಿದ್ದ ಜನರು ಆರೋಪ ಮಾಡಿದರು.
ಆರ್‌ಐ ಕಚೇರಿ ಹಾಗೂ ಉಪತಹಶೀಲ್ದಾರ್ ಕಚೇರಿಯಲ್ಲಿ ಜಮೀನಿಗೆ ಸಂಬಂಧಪಟ್ಟಂತಹ ಸಾರ್ವಜನಿಕರ ಕೆಲಸಗಳಾಗಬೇಕಾದರೆ ಇಲ್ಲಿನ ಸಿಬ್ಬಂದಿಗೆ ಲಂಚ ನೀಡಿದರೆ ಮಾತ್ರ ಆಗುತ್ತದೆ. ಇದಕ್ಕೆ ಮೇಲಾಧಿಕಾರಿಗಳು ಕಡಿವಾಣ ಹಾಕಬೇಕು.ವಕುಮಾರ್ ಉಪತಹಶೀಲ್ದಾರ್
ಇಲ್ಲಿನ ಆರ್‌ಐ ಕಚೇರಿ ಹಾಗೂ ಉಪತಹಶೀಲ್ದಾರ್ ಕಚೇರಿ ಕುರ್ಚಿಗಳು ಅಧಿಕಾರಿಗಳು ಹಾಗೂ ಸಿಬ್ಬಂದಿ ಇಲ್ಲದೆ ಬಣಗುಡುತ್ತಿವೆ. ಕಚೇರಿಗಳಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪಕ್ಕಕ್ಕೆ ಸರಿಸಲಾಗಿದೆ. ಕಚೇರಿಯಲ್ಲಿ ಮೂಲಸೌಕರ್ಯ ಕೊರತೆ ಕಾಡುತ್ತಿದೆ. ಎಲ್ಲೆಂದರಲ್ಲಿ ಕಸದ ರಾಶಿ ಕುಡಿಯುವ ನೀರಿನ ಅಭಾವ ಕಾಣುತ್ತಿದೆ. ಶೌಚಾಲಯವಿಲ್ಲದೇ ಸಾರ್ವಜನಿಕರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಸಾರ್ವಜನಿಕರು ಯಾವುದೇ ದಾಖಲೆ ಕೇಳಿದರೆ ತಾಲ್ಲೂಕು ಕಚೇರಿಯಲ್ಲಿ ಕೇಳಿ ಎಂಬ ಸಿದ್ಧ ಉತ್ತರ ದೊರೆಯುತ್ತಿದೆ. ಮಧ್ಯವರ್ತಿಗಳ ಮೂಲಕ ಹೋದರೆ ಮಾತ್ರ ಕೆಲಸಗಳಾಗುತ್ತಿವೆ ಎಂದು ಹೆಸರು ಹೇಳದ ಇಚ್ಛಿಸದ ವ್ಯಕ್ತಿಯೊಬ್ಬರು ಆರೋಪಿಸಿದರು.
ರಾಜಸ್ವ ನಿರೀಕ್ಷಕರ ಕಚೇರಿ ಹಾಗೂ ಉಪ ತಹಶೀಲ್ದಾರ್ ಕಾರ್ಯಾಲಯದಲ್ಲಿ ಈಗಾಗಲೇ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಲಾಗಿದೆ. ಗ್ರಾಮ ಸಹಾಯಕರು ಲಂಚ ಪಡೆಯುತ್ತಿರುವ ಬಗ್ಗೆ ಮಾಹಿತಿ ಇಲ್ಲ. ಉಪತಹಶೀಲ್ದಾರ್ ನೂತನ ಕಟ್ಟಡದ ಕೆಲ ಕೆಲಸಗಳು ಬಾಕಿ ಇದ್ದು ಶೀಘ್ರವಾಗಿ ಅಲ್ಲಿಗೆ ಸ್ಥಳಾಂತರ ಮಾಡಲಾಗುವುದು.ವಕುಮಾರ್ ಉಪತಹಶೀಲ್ದಾರ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.