ADVERTISEMENT

ವಿಜಯಪುರ: 23ಕ್ಕೆ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2025, 3:12 IST
Last Updated 22 ಸೆಪ್ಟೆಂಬರ್ 2025, 3:12 IST
   

ವಿಜಯಪುರ (ದೇವನಹಳ್ಳಿ): ಅಖಿಲ ಕರ್ನಾಟಕ ಮಿತ್ರ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸೆ.23 ರಂದು ಬೆಳಿಗ್ಗೆ 11 ಗಂಟೆಗೆ ವಿಜಯಪುರ ಪಟ್ಟಣದ ಗಾಂಧಿ ಚೌಕದ ಮೇಲೂರು ಪುಟ್ಟಯ್ಯನವರ ಮಂಟಪದಲ್ಲಿ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ, ಜಿಲ್ಲಾ ಸಹಕಾರ ಸಮ್ಮೇಳನ, ನಟ ವಿಷ್ಣುವರ್ಧನ್ ಜನ್ಮದಿನದ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.

ಸಮ್ಮೇಳನಾಧ್ಯಕ್ಷರಾಗಿ ವನಕಲ್ಲು ಮಠದ ಬಸವ ರಮಾನಂದ ಸ್ವಾಮೀಜಿ, ಉತ್ಸವಾಧ್ಯಕ್ಷರಾಗಿ ಹಾರಗದ್ದೆ ಆತ್ಮಾನಂದ ಗುರೂಜಿ, ಸಹಕಾರ ಸಮ್ಮೇಳನಾಧ್ಯಕ್ಷರಾಗಿ ಕುಂದಾಣ ವೆಂಕಟಪುರದ ಲಕ್ಷ್ಮಣ್ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ಹೆಚ್ಚಿನ ಜನರು ಭಾಗವಹಿಸಬೇಕೆಂದು ಸಂಘದ ರಾಜ್ಯಾಧ್ಯಕ್ಷ ಚಿ.ಮ.ಸುಧಾಕರ್ ಸುಧಾಕರ್ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT