ADVERTISEMENT

ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್

​ಪ್ರಜಾವಾಣಿ ವಾರ್ತೆ
Published 14 ಜೂನ್ 2025, 11:21 IST
Last Updated 14 ಜೂನ್ 2025, 11:21 IST
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಸ್ವೀಪ್ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನೆ ಸಭೆಯಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಮಾತನಾಡಿದರು
ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿ ನಡೆದ ಜಿಲ್ಲಾ ಸ್ವೀಪ್ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನೆ ಸಭೆಯಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಮಾತನಾಡಿದರು   

ದೇವನಹಳ್ಳಿ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಬೇಕೆಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್ ಹೇಳಿದರು.

ತಾಲ್ಲೂಕಿನ ಬೀರಸಂದ್ರದಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಜಿಲ್ಲಾ ಸ್ವೀಪ್ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಗೆ ಚುನಾವಣೆಯ ಜೀವಾಳ. ಮತದಾನದಿಂದ ಉತ್ತಮ ನಾಯಕನನ್ನು ಆಯ್ಕೆ ಮಾಡಬಹುದು. ಹಾಗಾಗಿ ಅರ್ಹ ಮತದಾರರು ಯಾರು ಕೂಡ ಮತದಾನದಿಂದ ವಂಚಿತರಾಗಬಾರದು ಎಂದರು.

ADVERTISEMENT

ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾರರ ಭಾಗವಹಿಸುವಿಕೆ(ಸ್ವೀಪ್) ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಕೈಗೊಂಡು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದರು.

ಮತದಾನಕ್ಕೆ ಬಳಸುವ ಇವಿಎಂ ಯಂತ್ರಗಳ ಬಗ್ಗೆ ಹಲವರು ವಿಭಿನ್ನ ಅಭಿಪ್ರಾಯ, ಅನಿಸಿಕೆ ಹೇಳುವರು. ಅಂತಹ ಅಭಿಪ್ರಾಯಗಳಿಗೆ ಉತ್ತರಿಸುವ, ವಿವರಿಸುವ ಮಾಹಿತಿ ಅಧಿಕಾರಿಗಳಲ್ಲಿ ಇರಬೇಕು. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಗುರುತಿನ ಚೀಟಿಯ ತಿದ್ದುಪಡಿ, ಹೊಸ ಕಾರ್ಡ್ ಪಡೆಯುವುದು ಹಾಗೂ ಇನ್ನಿತರೆ ಮತದಾನಕ್ಕೆ ಸಂಬಂಧಿಸಿದ ದೂರು, ಸಲಹೆಗಳಿಗೆ 1950 ಸಂಖ್ಯೆ ಸಂಪರ್ಕಿಸುವುದು. ಇವುಗಳ ಬಗ್ಗೆ ಅಧಿಕಾರಿಗಳು ತಿಳಿದಿರಬೇಕು ಎಂದರು.

ಮತದಾನ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ, ಅಂಗವಿಕಲರಿಗೆ ರ‍್ಯಾಂಪ್‌ ಸೇರಿದಂತೆ ಸುಸಜ್ಜಿತ ಮೂಲ ಸೌಕರ್ಯ ಇರುವುದನ್ನು ಖಚಿತ ಪಡಿಸಿಕೊಳ್ಳಿ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಕೆ.ಎನ್ ಅನುರಾಧ, ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿ.ಪಂ ಯೋಜನಾಧಿಕಾರಿ ರಾಮಕೃಷ್ಣಯ್ಯ, ಯೋಜನಾ ನಿರ್ದೇಶಕ ವಿಠಲ್ ಕಾವ್ಳೆ, ಮುಖ್ಯ ಲೆಕ್ಕಾಧಿಕಾರಿ ಮಂಜುನಾಥ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.