ADVERTISEMENT

ನಿರ್ಭಿತಿಯಿಂದ ಮತ ಚಲಾವಣೆ ನಾಗರಿಕರಿಗೆ ತಹಶೀಲ್ದಾರ್‌ ಸಲಹೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 3:07 IST
Last Updated 26 ಜನವರಿ 2022, 3:07 IST
ಆನೇಕಲ್‌ನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ತಹಶೀಲ್ದಾರ್ ಪಿ.ದಿನೇಶ್ ಪ್ರತಿಜ್ಞಾ ವಿಧಿ ಭೋದಿಸಿದರು
ಆನೇಕಲ್‌ನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ತಹಶೀಲ್ದಾರ್ ಪಿ.ದಿನೇಶ್ ಪ್ರತಿಜ್ಞಾ ವಿಧಿ ಭೋದಿಸಿದರು   

ಆನೇಕಲ್: ಪ್ರಜಾಪ್ರಭುತ್ವದಲ್ಲಿ ಮತದಾರರೇ ಪ್ರಭುಗಳು. ಹಾಗಾಗಿ, ಚುನಾವಣೆಗಳಲ್ಲಿ ಪ್ರತಿಯೊಬ್ಬರು ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಬೇಕು ಎಂದು ತಹಶೀಲ್ದಾರ್‌ ಪಿ. ದಿನೇಶ್‌ ತಿಳಿಸಿದರು.

ಪಟ್ಟಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಯ ಮತಕ್ಕೆ ವಿಶೇಷ ಸ್ಥಾನವಿದೆ. ಹಾಗಾಗಿ, ಯಾವುದೇ ಆಮಿಷಗಳಿಗೆ ಒಳಗಾಗದೇ ನಿರ್ಭಿತರಾಗಿ ಮತ ಚಲಾಯಿಸುವ ಅವಶ್ಯಕತೆಯಿದೆ ಎಂದು ಹೇಳಿದರು.

ADVERTISEMENT

ರಾಷ್ಟ್ರೀಯ ಮತದಾರರ ದಿನಾಚರಣೆ ಸಂದರ್ಭದಲ್ಲಿ ಪ್ರತಿಯೊಬ್ಬರು ಪ್ರತಿಜ್ಞೆ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಸಂಕಲ್ಪ ಮಾಡಬೇಕು ಎಂದರು.

ಯುವ ಮತದಾರರು ದಿನಾಚರಣೆ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಶಿರಸ್ತೇದಾರ್‌ರಾದ ಚಂದ್ರಶೇಖರ್‌, ಚೇತನ್‌
ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.