ADVERTISEMENT

ಯಲಿಯೂರು ವಿಎಸ್ಎಸ್ಎಸ್ಎನ್‌ಗೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2020, 13:13 IST
Last Updated 7 ಫೆಬ್ರುವರಿ 2020, 13:13 IST
ಚನ್ನರಾಯಪಟ್ಟಣ ಹೋಬಳಿ ಯಲಿಯೂರು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಆಯ್ಕೆಯಾಗಿರುವ ನಿರ್ದೇಶಕರನ್ನು ಸ್ಥಳೀಯರು ಅಭಿನಂದಿಸಿದರು
ಚನ್ನರಾಯಪಟ್ಟಣ ಹೋಬಳಿ ಯಲಿಯೂರು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಆಯ್ಕೆಯಾಗಿರುವ ನಿರ್ದೇಶಕರನ್ನು ಸ್ಥಳೀಯರು ಅಭಿನಂದಿಸಿದರು   

ವಿಜಯಪುರ: ಯಲಿಯೂರು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ ಹೊಸ ನಿರ್ದೇಶಕರು ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿ ಎಸ್.ಎಸ್.ಮಂಜುನಾಥ್ ತಿಳಿಸಿದ್ದಾರೆ.

ಚನ್ನರಾಯಪಟ್ಟಣ ಹೋಬಳಿ ಯಲಿಯೂರು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರ ಸ್ಥಾನಗಳಿಗೆ ಸಾಮಾನ್ಯ ಕ್ಷೇತ್ರಗಳಿಂದ ಅಯ್ಯಣ್ಣ, ಕೃಷ್ಣಪ್ಪ.ಎಂ, ಚಂದ್ರಶೇಖರ್.ಆರ್, ಮುನಿವೆಂಕಟಪ್ಪ, ಮಂಜುನಾಥ್ ಚುನಾಯಿತರಾಗಿದ್ದಾರೆ.

ಹಿಂದುಳಿದ ವರ್ಗದ ಪ್ರವರ್ಗ ’ಎ’ ಮೀಸಲು ಸ್ಥಾನದಲ್ಲಿ ಕೇಶವ.ವೈ.ಎಂ, ಸೀನಪ್ಪ, ಪರಿಶಿಷ್ಟ ಜಾತಿ ಮೀಸಲು ಸ್ಥಾನಕ್ಕೆ ನಂಜಪ್ಪ, ಪರಿಶಿಷ್ಟ ಪಂಗಡದ ಮೀಸಲು ಸ್ಥಾನಕ್ಕೆ ನಾರಾಯಣಸ್ವಾಮಿ, ಮಹಿಳಾ ಮೀಸಲು ಸ್ಥಾನಕ್ಕೆ ರಾಧಮ್ಮ, ಮಂಜುಳ, ಸಾಲಗಾರರಲ್ಲದ ಕ್ಷೇತ್ರಕ್ಕೆ ವೀರಪ್ಪ, ಬಿ.ಡಿ.ಸಿ.ಸಿ.ಬ್ಯಾಂಕಿನ ಪ್ರತಿನಿಧಿಯಾಗಿ ಮೇಲ್ವಿಚಾರಕ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT

ನೂತನ ನಿರ್ದೇಶಕ ನಾರಾಯಣಸ್ವಾಮಿ ಮಾತನಾಡಿ, ಸಹಕಾರಿ ಸಂಘದ ಮೂಲಕ ರೈತರಿಗೆ ನೆರವಾಗುವ ಕಾರ್ಯಕ್ರಮಗಳು ರೂಪುಗೊಳ್ಳಬೇಕು. ರೈತರು ಸಹಕಾರಿ ಸಂಘದಿಂದ ಪಡೆಯುವಂತಹ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳುವುದರ ಜತೆಗೆ ಪಡೆದ ಸಾಲವನ್ನು ನಿಗದಿತ ಸಮಯದಲ್ಲಿ ಮರುಪಾವತಿ ಮಾಡುವ ಮೂಲಕ ಸಂಘದ ಏಳಿಗೆಗೆ ಸಹಕರಿಸಬೇಕು ಎಂದರು. ಸ್ಥಳೀಯ ಮುಖಂಡರು, ನೂತನ ಮುಖಂಡರನ್ನು ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.