ADVERTISEMENT

ಕಾನೂನು ಗೊತ್ತಿದ್ದರೆ ಮಹಿಳೆ ಸುರಕ್ಷಿತ: ವಕೀಲ ಕೆಂಪೇಗೌಡ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2021, 5:19 IST
Last Updated 15 ನವೆಂಬರ್ 2021, 5:19 IST
ಚನ್ನರಾಯಪಟ್ಟಣ ಹೋಬಳಿ ನಲ್ಲೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ದೇವನಹಳ್ಳಿ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಗ್ರಾಮ ಪಂಚಾಯಿತಿ ವತಿಯಿಂದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ವಕೀಲ ಕೆಂಪೇಗೌಡ ಮಾತನಾಡಿದರು.
ಚನ್ನರಾಯಪಟ್ಟಣ ಹೋಬಳಿ ನಲ್ಲೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ದೇವನಹಳ್ಳಿ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಗ್ರಾಮ ಪಂಚಾಯಿತಿ ವತಿಯಿಂದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ವಕೀಲ ಕೆಂಪೇಗೌಡ ಮಾತನಾಡಿದರು.   

ವಿಜಯಪುರ: ಮಹಿಳೆಯರುಪೊಲೀಸ್ ಠಾಣೆಯಲ್ಲಿ ದೂರು ನೀಡಲು ಹೋದಾಗ ಪೊಲೀಸರು ದಾಖಲು ಮಾಡಿದ ದೂರು ತೃಪ್ತಿಕರವಾಗದಿದ್ದರೆ ಅಥವಾ ನಿಖರವಲ್ಲ ಎಂದು ಅನಿಸಿದರೆ ಅಂತಹ ಎಫ್ಐಆರ್ ಸಹಿ ಹಾಕಬಾರದು ಎಂದು ವಕೀಲ ಕೆಂಪೇಗೌಡ ಹೇಳಿದರು.

ಚನ್ನರಾಯಪಟ್ಟಣ ಹೋಬಳಿ ನಲ್ಲೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಇತ್ತೀಚೆಗೆ ದೇವನಹಳ್ಳಿ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಆಯೋಜಿಸಿದ್ದ ‘ಕಾನೂನು ಅರಿವು ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.

ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯನ್ನು ಮತ್ತೊಬ್ಬ ಮಹಿಳೆ ಸಭ್ಯತೆಯಿಂದ ತಪಾಸಣೆಗೆ ಒಳಪಡಿಸಬೇಕು. ಒಂದು ವೇಳೆ ತಪಾಸಣೆ ಹೆಸರಲ್ಲಿ ಹಿಂಸೆ ನೀಡಿದರೆ ಅವರ ವಿರುದ್ಧವೂ ದೂರು ನೀಡಬಹುದು ಎಂದು ತಿಳಿಸಿದರು.

ADVERTISEMENT

ಹೆಣ್ಣುಮಕ್ಕಳ ರಕ್ಷಣೆಗಾಗಿ ಕಾನೂನಿನಲ್ಲಿ ಸಾಕಷ್ಟು ಅವಕಾಶಗಳಿದ್ದು, ಕಾನೂನಿನ ಬಗ್ಗೆ ತಿಳಿದುಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮಕೃಷ್ಣ ಮಾತನಾಡಿ, ಎನ್‌ಸಿಆರ್‌ಬಿ ಮಾಹಿತಿ ಪ್ರಕಾರ, 2019ರಲ್ಲಿ ದೇಶದಲ್ಲಿ ಪ್ರತಿದಿನ 95 ಅತ್ಯಾಚಾರ ಪ್ರಕರಣ ವರದಿಯಾಗುತ್ತವೆ. ವರ್ಷದಲ್ಲಿ ಒಟ್ಟು 32,033 ಪ್ರಕರಣ ದಾಖಲಾಗಿವೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.