
ಆನೇಕಲ್: ತಾಲ್ಲೂಕಿನ ಮರಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಮಂಜುಳಾ ನಾರಾಯಣ ರೆಡ್ಡಿ ಮತ್ತು ಉಪಾಧ್ಯಕ್ಷರಾಗಿ ಚಂದ್ರಕಲಾ ಯಲ್ಲಪ್ಪ ಅವರು ಆಯ್ಕೆಯಾಗಿದ್ದಾರೆ.
ಮರುಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ರಮೇಶ್ ರೆಡ್ಡಿ ಮತ್ತು ಉಪಾಧ್ಯಕ್ಷರಾಗಿದ್ದ ಮಂಜುಳಾ ಸೋಮಶೇಖರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶನಿವಾರ ಚುನಾವಣೆ ನಿಗದಿಯಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಮಂಜುಳಾ ನಾರಾಯಣ ರೆಡ್ಡಿ ಮತ್ತು ವನಿತಾ ಅವರು ನಾಮಪತ್ರ ಸಲ್ಲಿಸಿದ್ದರು. 14 ಮತಗಳನ್ನು ಪಡೆದು ಮಂಜುಳಾ ನಾರಾಯಣ ರೆಡ್ಡಿ ಅವರು ಅಧ್ಯಕ್ಷರಾದರು. ವನಿತಾ ಅವರು 7 ಮತದೊಂದಿಗೆ ಪರಭಾವಗೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರಕಲಾ ಯಲ್ಲಪ್ಪ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾಗಿದ್ದಾರೆ.
ಬಿಜೆಪಿ ಆನೇಕಲ್ ವಿಧಾನಸಭಾಧ್ಯಕ್ಷ ಎಸ್.ಆರ್.ಟಿ.ಅಶೋಕ್ ರೆಡ್ಡಿ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಬಂಡಾಪುರ ರಾಮಚಂದ್ರ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ರಾಮಕೃಷ್ಣ ರೆಡ್ಡಿ, ಮುಖಂಡರಾದ ರಮೇಶ್ ರೆಡ್ಡಿ, ಅನಿಲ್ ರೆಡ್ಡಿ, ಮುರುಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.