ADVERTISEMENT

ಸ್ತ್ರೀ ಸಬಲೀಕರಣ ಅಭಿವೃದ್ಧಿ ಸಂಕೇತ

ಆನೇಕಲ್‌: ಸಾವಿತ್ರಿ ಬಾಯಿ ಫುಲೆ ಜನ್ಮ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 11 ಜನವರಿ 2023, 7:19 IST
Last Updated 11 ಜನವರಿ 2023, 7:19 IST
ಆನೇಕಲ್‌ನಲ್ಲಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯಿಂದ ಸಾವಿತ್ರಿ ಬಾಯಿ ಫುಲೆ ಅವರ ಜನ್ಮ ದಿನಾಚರಣೆ ನಡೆಯಿತು
ಆನೇಕಲ್‌ನಲ್ಲಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯಿಂದ ಸಾವಿತ್ರಿ ಬಾಯಿ ಫುಲೆ ಅವರ ಜನ್ಮ ದಿನಾಚರಣೆ ನಡೆಯಿತು   

ಆನೇಕಲ್: ಪಟ್ಟಣದಲ್ಲಿ ಪ್ರಜಾ ವಿಮೋ ಚನಾ ಚಳವಳಿ ಸಂಘಟನೆ ಯಿಂದ ಸಾವಿತ್ರಿ ಬಾಯಿ ಫುಲೆ ಅವರ ಜನ್ಮ ದಿನಾಚರಣೆ ಮಂಗಳವಾರ ನಡೆಯಿತು.

ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಆನೇಕಲ್‌ ಕೃಷ್ಣಪ್ಪ ಮಾತನಾಡಿ, ಸಾಮಾಜಿಕ ಅಭಿವೃದ್ಧಿ ನಮ್ಮ ಧ್ಯೇಯ. ಎಲ್ಲಾ ವರ್ಗಗಳಿಗೂ ಶಿಕ್ಷಣ ದೊರೆಯಬೇಕು ಎಂಬುದು ಸಾವಿತ್ರ ಬಾಯಿ ಫುಲೆ ಅವರ ಆಶಯವಾಗಿತ್ತು. ಅವರು ಜಾತಿ ನಿರ್ಮೂಲನೆ, ಮೂಢನಂಬಿಕೆ ವಿರುದ್ಧ ಹೋರಾಟ ಮಾಡಿದ ಮಹಾನ್‌ ಚೇತನ ಎಂದರು.

ಅನಿಷ್ಟ ಪದ್ಧತಿಗಳಿಂದ ದೂರ ವಾದಾಗ ಮಾತ್ರ ಸಮಾಜದಲ್ಲಿ ಬದಲಾ ವಣೆ ಸಾಧ್ಯ ಎಂಬುದನ್ನು ಫುಲೆ ಸಾಧಿಸಿ ತೋರಿಸಿದ್ದಾರೆ. ಅವರ ತತ್ವ, ಸಿದ್ಧಾಂತ, ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಯುವತಿಯರು ಅವರ ಸಿದ್ಧಾಂತ ಅಳವಡಿಸಿಕೊಂಡು ಸಮಾಜದ ಮುನ್ನೆಲೆಗೆ ಬರಬೇಕು ಎಂದರು.

ADVERTISEMENT

ಮಹಿಳಾ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಸಾವಿತ್ರಿ ಬಾಯಿ ಫುಲೆ ಅವರ ಜನ್ಮ ದಿನಾಚರಣೆಯನ್ನು ಸರ್ಕಾರದ ಮಟ್ಟದಲ್ಲಿ ಆಯೋಜಿಸಿರುವುದು ಶ್ಲಾಘನೀಯ ಎಂದು ಹೇಳಿದರು.

ಅಂಬೇಡ್ಕರ್‌, ಫುಲೆ ಅವರಂತಹ ಮಹಾನ್‌ ಸಾಧಕರು ನಮಗೆ ದಾರಿದೀಪವಾಗಿದ್ದಾರೆ. ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ಮೂರು ಮಂತ್ರಗಳನ್ನು ಅಂಬೇಡ್ಕರ್‌ ನೀಡಿದ್ದಾರೆ. ತಪ್ಪು ನಡೆದಾಗ ಪ್ರಶ್ನಿಸುವ ಮನೋಭಾವವನ್ನು ಯುವಕರು ಬೆಳೆಸಿಕೊಳ್ಳಬೇಕು. ಪ್ರಶ್ನೆ ಮಾಡುವ ಶಕ್ತಿ, ಹೋರಾಟವು ಚಳವಳಿಗಳಿಂದ ಯುವಕರಿಗೆ ಬರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸಂಘಟನೆಯ ವಿವಿಧ ವಿಭಾಗದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೊಪ್ಪ ರಾಮಾಂಜಿ, ಕಾರ್ಯದರ್ಶಿ ಶ್ರೀನಿವಾಸ್, ತಾಲ್ಲೂಕು ಅಧ್ಯಕ್ಷ ರವಿ, ಮುಖಂಡರಾದ ವೆಂಕಟೇಶ್‌, ವಿಜಯಕುಮಾರ್, ಮುನಿರಾಜು, ಎ. ಲವ, ಗಣೇಶ್, ಪರಶುರಾಮ್‌, ದೇವರಾಜು, ರಮೇಶ್‌, ಬಾಬು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.