
ಸೂಲಿಬೆಲೆ(ಹೊಸಕೋಟೆ): ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಜಾರಿಗೊಳಿಸಿದ ಬಳಿಕ ಮಹಿಳಾ ಸಬಲೀಕರಣದೊಂದಿಗೆ ಆರ್ಥಿಕ ಚೇತರಿಕೆ ಆಗುತ್ತಿದೆ ಎಂದು ಗ್ಯಾರಂಟಿ ಯೋಜನೆ ತಾಲ್ಲೂಕು ಸಮಿತಿ ಅಧ್ಯಕ್ಷ ಚಿಕ್ಕಹುಲ್ಲೂರು ಬಚ್ಚೇಗೌಡ ಹೇಳಿದರು.
ಹೋಬಳಿಯ ಗಿಡ್ಡಪ್ಪನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಕುಂದು ಕೊರತೆ ಸಭೆಯಲ್ಲಿ ಮಾತನಾಡಿದರು.
ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಮತ್ತು ಶಕ್ತಿ ಯೋಜನೆಯಿಂದ ಮಹಿಳೆಯ ಸಬಲೀಕರಣ ಹಾಗೂ ಆರ್ಥಿಕತೆ ಚೇತರಿಕೆ ಕಾಣುತ್ತಿದೆ. ಇದು ಕಾಂಗ್ರೆಸ್ ನೇತೃತ್ವದ ಸರ್ಕಾರ ಬಡವರ ಧ್ವನಿಯಾಗಿ ಕೆಲಸ ಮಾಡುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಯುವನಿಧಿಯಿಂದ ಯುವ ಸಮುದಾಯದ ಅರ್ಥಿಕ ಪರಿಸ್ಥಿತಿಯೂ ಉತ್ತಮಗೊಂಡಿದೆ ಎಂದು ತಿಳಿಸಿದರು.
ಸಮಿತಿ ಸದಸ್ಯ ಸೈಯದ್ ಮಹಬೂಬ್, ನಿರ್ದೇಶಕ ಅಮ್ಜದ್ ಬೇಗ್, ಹೇಮಣ್ಣ, ಬೋದನಹೊಸಹಳ್ಳಿ ಮಂಜುನಾಥ್, ಗ್ರಾ.ಪಂ.ಅಧ್ಯಕ್ಷೆ ನಾರಾಯಣಮ್ಮ, ಉಪಾಧ್ಯಕ್ಷ ನಾಗೇಶ್, ಪಿಡಿಓ ಆನಂದಕುಮಾರ್, ಮಹಿಳಾ ಕಲ್ಯಾಣ ಇಲಾಖೆ ಭಾರತಿ, ಆಹಾರ ಇಲಾಖೆಯ ಆಹಾರ ನಿರೀಕ್ಷಕ ಶಿವಕುಮಾರ್, ಕೆಇಬಿ ಇಂಜನಿಯರ್ ಮಹೇಶ್, ಮಾಜಿ ಅಧ್ಯಕ್ಷ ಅಕ್ಬರ್ ಅಲಿಖಾನ್, ಅರಸನಹಳ್ಳಿ ಶಿವಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.