
ಆನೇಕಲ್: ತಾಲ್ಲೂಕಿನ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿಯಲ್ಲಿ ಸಾಬೀಕ ರಿಸರ್ಚ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಕಂಪನಿಯು ಏಕಾಏಕಿ ಕೆಲಸದಿಂದ ತಮ್ಮನ್ನು ವಜಾಗೊಳಿಸದೆ ಎಂದು ಆರೋಪಿಸಿ, ಕಾರ್ಮಿಕರು ಕಂಪನಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.
ನಾವೆಲ್ಲಾ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದೇವೆ. ಕಂಪನಿಯು ಯಾವುದೇ ಮಾಹಿತಿ ನೀಡದೆ ಏಕಾಏಕಿ 25 ಮಂದಿಯನ್ನು ಕೆಲಸದಿಂದ ತೆಗೆದಿರುವುದ ಅನ್ಯಾಯ. ಇದು ಕಾನೂನಿಗೆ ವಿರುದ್ಧವಾಗಿದೆ. ಕಳೆದ ಮೂರು ದಿನಗಳಿಂದಲೂ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದೇವೆ. ಆದರೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಕಾರ್ಮಿಕ ಅಜಯ್ ತಿಳಿಸಿದರು.
‘ಕೆಲಸದಿಂದ ತೆಗೆದು ಹಾಕಿರುವ ಎಲ್ಲಾ 25 ಕಾರ್ಮಿಕರು ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದೇವೆ. ಕಂಪನಿಯ ಆಡಳಿತ ಮಂಡಳಿಯು ನಮ್ಮ ಸಮಸ್ಯೆಯನ್ನು ಆಲಿಸಬೇಕು ಮತ್ತು ಈ ಕೆಲಸವನ್ನೇ ನಂಬಿ ಜೀವನ ಸಾಗಿಸುತ್ತಿದ್ದೇವೆ. ನಮ್ಮನ್ನು ಮರು ನೇಮಕ ಮಾಡಿಕೊಳ್ಳಬೇಕೆಂದು’ ಕಾವ್ಯ ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.