ದೇವನಹಳ್ಳಿ: ಮೇ10ರಂದು ನಡೆಯಲಿರುವ ಮತದಾನ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಬೇಕು ಎಂದು ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
ಮೇ 10 ರಂದು ರಾಜ್ಯದ್ಯಾಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅರ್ಹ ಮತದಾನರಿಗೆ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸಲು ಎಲ್ಲಾ ಮಾಲೀಕರು, ನಿಯೋಜಕರು ಅನುವು ಮಾಡಿ ಕೊಡಬೇಕು ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಕಾರ್ಖಾನೆಗಳು, ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಮೇ 10 ರಂದು ಅರ್ಹ ಕಾರ್ಮಿಕರು ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕು. ತಪ್ಪಿದಲ್ಲಿ, ಸಂಬಂಧಪಟ್ಟ ಸಂಸ್ಥೆ, ನಿಯೋಜಕರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.