ADVERTISEMENT

ದೇಶನಾರಾಯಣಸ್ವಾಮಿ ಬ್ರಹ್ಮರಥೋತ್ಸವ 

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2019, 13:49 IST
Last Updated 21 ಮಾರ್ಚ್ 2019, 13:49 IST
ಬೂದಿಗೆರೆ ಗ್ರಾಮದ ದೇಶನಾರಾಯಣಸ್ವಾಮಿ ದೇವಾಲಯ ಆವರಣದಲ್ಲಿ ನಡೆದ  ಬ್ರಹ್ಮರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತಾದಿಗಳು ಭಾಗವಹಿಸಿದ್ದರು
ಬೂದಿಗೆರೆ ಗ್ರಾಮದ ದೇಶನಾರಾಯಣಸ್ವಾಮಿ ದೇವಾಲಯ ಆವರಣದಲ್ಲಿ ನಡೆದ  ಬ್ರಹ್ಮರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತಾದಿಗಳು ಭಾಗವಹಿಸಿದ್ದರು   

ವಿಜಯಪುರ: ತಾಲ್ಲೂಕಿನ ಬೂದಿಗೆರೆ ಗ್ರಾಮದ ದೇಶನಾರಾಯಣಸ್ವಾಮಿ ದೇವಾಲಯದಲ್ಲಿ ಹೋಳಿ ಹುಣ್ಣಿಮೆ ಅಂಗವಾಗಿ ದೇಶ ನಾರಾಯಣಸ್ವಾಮಿ ಹಾಗೂ ರಾಮಚಂದ್ರ ಸ್ವಾಮಿ ಬ್ರಹ್ಮರಥೋತ್ಸವ ವಿಜೃಂಭಣೆಯಿಂದ ನಡೆಯಿತು.

ಇದರ ಅಂಗವಾಗಿ ದೇವರಿಗೆ ವಿಶೇಷ ಪೂಜೆ, ಹೂವಿನ ಅಲಂಕಾರ ಮಾಡಲಾಗಿತ್ತು. ಎರಡು ರಥಗಳನ್ನು ಊರಿನ ಮುಖ್ಯ ರಸ್ತೆಯಿಂದ ಸಾಯಿಬಾಬ ಮಂದಿರದವರೆಗೂ ಮೆರವಣಿಗೆ ಮಾಡಲಾಯಿತು.

ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ರಥಕ್ಕೆ ಬಾಳೆಹಣ್ಣು, ದವನ ಎಸೆದರು. ಉತ್ಸವದಲ್ಲಿ ವೀರಭದ್ರ ಕುಣಿತ, ತಮಟೆ ವಾದ್ಯಗಳು ಹಾಗೂ ಸಿಂಗಾರ ಮಾಡಿದ್ದ ಜೋಡೆತ್ತುಗಳ ಮೆರವಣಿಗೆ ಎಲ್ಲರ ಗಮನ ಸೆಳೆಯಿತು.

ADVERTISEMENT

ಸಾಯಿ ಮಂದಿರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಕ್ತರು ದರ್ಶನಕ್ಕೆ ಸಾಲುಗಟ್ಟಿ ನಿಂತು ದರ್ಶನ ಪಡೆದರು. ರಥೋತ್ಸವಕ್ಕೆ ಬಂದಿದ್ದ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.

ಹರ್ಷ ಮೊಯಿಲಿ, ಶಾಸಕ ನಿಸರ್ಗ ನಾರಾಯಣಸ್ವಾಮಿ, ಬಿಜೆಪಿ ಅಭ್ಯರ್ಥಿ ಬಿ.ಎನ್.ಬಚ್ಚೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನಾರಾಯಣಪ್ಪ, ದೇವನಹಳ್ಳಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಭಾರತಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ. ಶ್ರೀನಿವಾಸ್‌ಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.