ADVERTISEMENT

ಗಾಂಧೀಜಿ ಚಿಂತನೆ ಯುವ ಸಮುದಾಯಕ್ಕೆ ಸ್ಫೂರ್ತಿ: ನಿಸರ್ಗ ನಾರಾಯಣಸ್ವಾಮಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2018, 14:10 IST
Last Updated 2 ಅಕ್ಟೋಬರ್ 2018, 14:10 IST
ತಾಲ್ಲೂಕು ಕಚೇರಿಯಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿದರು
ತಾಲ್ಲೂಕು ಕಚೇರಿಯಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿದರು   

ದೇವನಹಳ್ಳಿ: ಕಲುಷಿತ ಸಮಾಜದಲ್ಲಿ ಗಾಂಧಿ ಚಿಂತನೆ ಯುವ ಸಮುದಾಯಕ್ಕೆ ಸ್ಫೂರ್ತಿ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.

ಇಲ್ಲಿನ ತಾಲ್ಲೂಕು ಆಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಹಶೀಲ್ದಾರ್‌ ಎಂ.ರಾಜಣ್ಣ ಮಾತನಾಡಿ, ಇಡೀ ದೇಶ ಮತ್ತು ರಾಜ್ಯ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಿಸುತ್ತಿದೆ. ರಾಜ್ಯದ ಪ್ರತಿ ತಾಲ್ಲೂಕಿಗೆ ಒಂದರಂತೆ ‘ಗಾಂಧಿ ಗ್ರಾಮ’ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ADVERTISEMENT

ಗಾಂಧೀಜಿ ಅವರ ಸ್ವರಾಜ್ಯ ಪರಿಕಲ್ಪನೆ ಅಸ್ತಿತ್ವಕ್ಕೆ ಬಂದ ಮೇಲೆ ಗ್ರಾಮ ಪಂಚಾಯಿತಿಗಳನ್ನು ಸ್ಥಳೀಯ ಸರ್ಕಾರವೆಂದು ಪರೋಕ್ಷವಾಗಿ ಕರೆಯಲಾಗುತ್ತದೆ. ಅಮೂಲಾಗ್ರ ಬದಲಾವಣೆಯಾಗಿ ಮೂಲ ಸೌಲಭ್ಯ ಸಿಗಬೇಕೆಂಬುದು ಅವರ ಆಶಯವಾಗಿತ್ತು. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದರು.

ಪುರಸಭೆ ಸದಸ್ಯ ವೈ.ಸಿ.ಸತೀಶ್‌ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.