ವಿಜಯಪುರ (ದೇವನಹಳ್ಳಿ): ಹೋಬಳಿಯ ಹಲವೆಡೆ ಗ್ರಾಮಗಳಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಬುಧವಾರ ಬಮೂಲ್ ನೂತನ ನಿರ್ದೇಶಕ ಎಸ್.ಪಿ.ಮುನಿರಾಜು ಭೇಟಿ ನೀಡಿದರು.
ಪಟ್ಟಣದ ಸಮೀಪದ ಯಲುವಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಮಾತನಾಡಿ, ಹೈನುಗಾರಿಕೆ ಗ್ರಾಮೀಣ ಭಾಗದ ರೈತರಿಗೆ ವರದಾನವಾಗಿದ್ದು, ಆರ್ಥಿಕ ಜೀವನ ಮಟ್ಟ ಸುಧಾರಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಯುವಕರು ಹೈನುಗಾರಿಕೆಯತ್ತ ಆಸಕ್ತಿ ತೋರಿರುವುದು ಉತ್ತಮ ಬೆಳೆವಣಿಗೆಯಾಗಿದೆ ಎಂದರು.
ಹೈನುಗಾರಿಕೆಯಲ್ಲಿ ತೊಡಗುವ ರೈತರಿಗೆ ಖಚಿತ ಆದಾಯ ಸಿಗಲಿದ್ದು, ನಷ್ಟ ಸಾಧ್ಯತೆ ಕಡಿಮೆ. ಒಕ್ಕೂಟದಿಂದ ಸಿಗುವ ಸೌಲಭ್ಯವನ್ನು ಹೈನುಗಾರರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ರೈತರಿಗೆ ಸಲಹೆ ನೀಡಿದರು.
ಇದೇ ವೇಳೆ ಸಹಕಾರಿ ಸಂಘಗಳ ಕಾರ್ಯವೈಖರಿ ಪರಿಶೀಲಿಸಿ, ಹೈನುಗಾರಿಕೆ ಮತ್ತು ಹಾಲು ಉತ್ಪಾದಕರ ಸಮಸ್ಯೆ ಆಲಿಸಿದರು.
ಮುಖಂಡರಾದ ಶ್ರೀನಿವಾಸ್, ಅಪ್ಪಯಣ್ಣ, ವೀರೇಗೌಡ, ವೀರುಪಾಕ್ಷಪ್ಪ, ಸುದರ್ಶನ್, ನಾಗವೇಣಿ, ರಾಜೇಶ್, ನಾರಾಯಣಸ್ವಾಮಿ, ಮಂಜುನಾಥ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.