
ಪ್ರಜಾವಾಣಿ ವಾರ್ತೆ
ಯುವನಿಧಿ
ದೇವನಹಳ್ಳಿ: ಯುವನಿಧಿ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾಗಳಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳು ಸೇವಾ ಸಿಂಧು ಮೂಲಕ ನೋಂದಣಿ ಮಾಡಿಕೊಳ್ಳಬೇಕು.
ಪ್ರತಿ ತಿಂಗಳ ಕೊನೆ ವಾರದೊಳಗೆ ತಾನು ನಿರುದ್ಯೋಗಿ ಮತ್ತು ವ್ಯಾಸಂಗ ಮಾಡುತ್ತಿಲ್ಲ ಹಾಗೂ ಸ್ವಯಂ ಉದ್ಯೋಗಿಯಲ್ಲ ಎಂಬುದಾಗಿ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು.
ಫಲಾನುಭವಿಗಳು ಕಡ್ಡಾಯವಾಗಿ ಆಧಾರ್ ಸೀಡ್ ಆಗಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಅಭ್ಯರ್ಥಿಗಳು https://sevasindhugs.karnataka.gov.in ನಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳಬಹುದು.
ಈಗಾಗಲೇ ಪ್ರಯೋಜನ ಪಡೆಯುತ್ತಿರುವ ಫಲಾನುಭವಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಇಲ್ಲವಾದಲ್ಲಿ ನೇರ ನಗದು ವರ್ಗಾವಣೆ ಆಗುವುದಿಲ್ಲ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.