ADVERTISEMENT

ಯುವನಿಧಿ: ಜ.6ರಿಂದ ವಿಶೇಷ ನೋಂದಣಿ ಅಭಿಯಾನ

​ಪ್ರಜಾವಾಣಿ ವಾರ್ತೆ
Published 4 ಜನವರಿ 2025, 15:11 IST
Last Updated 4 ಜನವರಿ 2025, 15:11 IST
ದೇವನಹಳ್ಳಿಯ ಬೀರಸಂದ್ರದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಶಿವಶಂಕರ.ಎನ್‌ ಬಿಡುಗಡೆ ಮಾಡಿದರು.
ದೇವನಹಳ್ಳಿಯ ಬೀರಸಂದ್ರದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಯುವನಿಧಿ ವಿಶೇಷ ನೋಂದಣಿ ಅಭಿಯಾನ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿ ಶಿವಶಂಕರ.ಎನ್‌ ಬಿಡುಗಡೆ ಮಾಡಿದರು.   

ದೇವನಹಳ್ಳಿ: ಯುವನಿಧಿ ಯೋಜನೆ ಅಡಿಯಲ್ಲಿ 2023–24ನೇ ಸಾಲಿನಲ್ಲಿ ತೇರ್ಗಡೆಯಾದ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಅಭ್ಯರ್ಥಿಗಳನ್ನು ಯುವ ನಿಧಿ ಯೋಜನೆ ವ್ಯಾಪ್ತಿಗೆ ತರುವ ಸಂಬಂಧ ಜನವರಿ 6 ರಿಂದ 20 ರವರೆಗೆ ಜಿಲ್ಲೆಯಾದ್ಯಂತ ಯುವನಿಧಿ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಅಭ್ಯರ್ಥಿಗಳು ಮೇಲೆ ತಿಳಿಸಿದ ನೋಂದಣಿ ಕೇಂದ್ರಗಳಲ್ಲಿ ಅಥವಾ www.sevasindhugs.karnataka.gov.in ನೋಂದಾಯಿಸಬಹುದಾಗಿದೆ. 2024ನೇ ಸಾಲಿನ ಪದವಿ ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾದಲ್ಲಿ ತೆರ್ಗಡೆ ಹೊಂದಿ 180 ದಿನಗಳೊಳಗೆ ಇರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದು.

ಯೋಜನೆಯ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳ 01 ರಿಂದ 25ನೇ ತಾರೀಕಿನೊಳಗೆ ಘೋಷಣೆಯನ್ನು ಆನ್‌ಲೈನ್‌ ಮೂಲಕ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ. ಯೋಜನೆ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಸಹಾಯಮಾಣಿ ಸಂಖ್ಯೆ 1800-599-7154 ಯಿಂದ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಎಲ್ಲೆಲ್ಲಿ ನೋಂದಣಿ

ಯುವನಿಧಿ ಯೋಜನೆ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳಲು ಕೆಳಕಂಡ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಯುವನಿಧಿ ಸಹಾಯವಾಣಿ ಮತ್ತು ನೋಂದಣಿ ಕೇಂದ್ರಗಳನ್ನು ತೆರೆಯಲಾಗಿರುತ್ತದೆ.

ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಚೇರಿ ಜಿಲ್ಲಾಡಳಿತ ಭವನ ಕೊಠಡಿ ಸಂಖ್ಯೆ 123 ಬೀರಸಂದ್ರ ದೇವನಹಳ್ಳಿ. ತಾಲ್ಲೂಕು ಪಂಚಾಯಿತಿ ಕಚೇರಿ: ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ನೆಲಮಂಗಲ  ನಗರಸಭೆ ದೊಡ್ಡಬಳ್ಳಾಪುರ ಹೊಸಕೋಟೆ ನೆಲಮಂಗಲ. ದೇವನಹಳ್ಳಿ ವಿಜಯಪುರ ಪುರಸಭೆ ಪಟ್ಟಣ ಪಂಚಾಯಿತಿ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ದೇವನಹಳ್ಳಿ ದೊಡ್ಡಬಳ್ಳಾಪುರ ಸೂಲಿಬೆಲೆ ಹೊಸಕೋಟೆ ತ್ಯಾಮಗೊಂಡ್ಲು ನೆಲಮಂಗಲ. ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ದೊಡ್ಡಬಳ್ಳಾಪುರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.