ADVERTISEMENT

ಜ.5ರಂದು ಜಿಪಂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ 

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2018, 13:15 IST
Last Updated 14 ಡಿಸೆಂಬರ್ 2018, 13:15 IST

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆಯು ಜ.5ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

ಇದಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಚುನಾವಣಾ ಸಭೆಯನ್ನು ಬೆಂಗಳೂರಿನ ಕೆಂಪೇಗೌಡ ರಸ್ತೆಯಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಸಲಾಗುವುದು. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಶಿವಯೋಗಿ.ಸಿ.ಕಳಸದ ಅವರು ಅಧ್ಯಕ್ಷತೆ ವಹಿಸುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT