ADVERTISEMENT

ಅಂಗನವಾಡಿ ಕಾಯಕರ್ತರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2011, 7:35 IST
Last Updated 22 ಮಾರ್ಚ್ 2011, 7:35 IST

ಬೆಳಗಾವಿ: ಅಂಗನವಾಡಿ ನೌಕರರಿಗೆ ಪಿಂಚಣಿ ಯೋಜನೆ ನೀಡುವ ಉದ್ದೇಶದಿಂದ ಷೇರು ಮಾರುಕಟ್ಟೆ ಆಧಾರಿತ ಯೋಜನೆ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಸಮಂಜಸ ಕ್ರಮವಲ್ಲ. ಈ ಹಿಂದೆ ಮುಖ್ಯಮಂತ್ರಿಗಳು ಪ್ರಕಟಿಸಿದಂತೆ ಎಲ್‌ಐಸಿ ಅಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಅಂಗನವಾಡಿ ನೌಕರ ಸಂಘದ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಷೇರು ಮಾರುಕಟ್ಟೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಡ ಹೇರುತ್ತಿದ್ದಾರೆ. ಇದು ಅಂಗನವಾಡಿ ನೌಕರರ ಹಿತಾಸಕ್ತಿಗೆ ವಿರೋಧವಾಗಿದೆ. ತಕ್ಷಣ ನಿವೃತ್ತರಾಗುವ ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ಲಕ್ಷ ರೂಪಾಯಿ ಹಾಗೂ ಕಾರ್ಯಕರ್ತೆಯರಿಗೆ ರೂ 50 ಸಾವಿರ ನೀಡಬೇಕು. ಪ್ರಸ್ತುತ ಹೊರಡಿಸಿರುವ ಸುತ್ತೋಲೆಯನ್ನು ರದ್ದು ಪಡಿಸಬೇಕು ಎಂದು ಅವರು ಆಗ್ರಹಿಸಿದರು. ನೇತೃತ್ವವನ್ನು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ಸುಜಾತಾ ಬೆಳಗಾಂವಕರ್, ಕಾರ್ಮಿಕ ಮುಖಂಡ ಗೈಬು ಜೈನೆಖಾನ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.