ಚಿಕ್ಕೋಡಿ: ಪಟ್ಟಣದ ಗಾಂಧಿ ಮಾರ್ಕೆಟ್‌ನಲ್ಲಿರುವ ಕಿರಾಣಿ ಅಂಗಡಿಯೊಂದರ ಮೇಲೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಅಕ್ಕಿ ಮತ್ತು ಗೋಧಿಯನ್ನು ಪತ್ತೆ ಹಚ್ಚಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ ಮತ್ತು ಪಿಎಸ್‌ಐ ಅನೀಲಕುಮಾರ ಅವರು ಸಿಬ್ಬಂದಿಯೊಂದಿಗೆ ಚಿದಾನಂದ ಶ್ರೀಕಾಂತ ಸಮ್ಮತಶೆಟ್ಟಿ ಎಂಬುವರರ ಅಂಗಡಿ ಮೇಲೆ ದಿಢೀರ್ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿಟ್ಟು ಮಾರಾಟ ಮಾಡುತ್ತಿದ್ದರೆನ್ನಲಾದ ಸುಮಾರು 10 ಟನ್ ಅಕ್ಕಿ ಮತ್ತು ಒಂದು ಟನ್ ಗೋಧಿಯನ್ನು ವಶಪಡಿಸಿಕೊಂಡಿದ್ದಾರೆ.
ನ್ಯಾಯಬೆಲೆ ಅಂಗಡಿಗಳಿಗೆ ಸರಬರಾಜು ಮಾಡುವ ಧಾನ್ಯಗಳನ್ನು ಈ ಅಂಗಡಿಗಳಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿ ಮಾರಾಟ ಮಾಡಲಾಗುತ್ತಿತ್ತು. ಇದಲ್ಲದೆ ರಾಜ್ಯ ಹಾಗೂ ಹೊರರಾಜ್ಯದ ಕಾಖಾನೆಗಳಿಗೂ ಪಡಿತರ ವಿತರಣೆಗಾಗಿ ಮೀಸಲಿಟ್ಟಿದ್ದ ಅಕ್ಕಿ ಮ್ತು ಗೋಧಿಯನ್ನೂ ಅಕ್ರಮವಾಗಿ ಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.