ADVERTISEMENT

ಅತಂತ್ರ ತಾಪಂನಲ್ಲಿ ಆಪರೇಷನ್ ಕಮಲ: ಕತ್ತಿ

​ಪ್ರಜಾವಾಣಿ ವಾರ್ತೆ
Published 5 ಜನವರಿ 2011, 10:50 IST
Last Updated 5 ಜನವರಿ 2011, 10:50 IST

ಬೆಳಗಾವಿ: ಜಿಲ್ಲೆಯ ಎರಡು ತಾಪಂಗಳಲ್ಲಿ ಅತಂತ್ರ ಪರಿಸ್ಥಿತಿ ಇದ್ದು, ಅವನ್ನು ವಶಪಡಿಸಿಕೊಳ್ಳಲು ಅಗತ್ಯವಾದರೆ ‘ಆಪರೇಷನ್ ಕಮಲ’ ನಡೆಸಲಾಗುತ್ತದೆ ಎಂದು ಉಸ್ತುವಾರಿ ಸಚಿವ ಉಮೇಶ ಕತ್ತಿ ಮಂಗಳವಾರ ಇಲ್ಲಿ ಪ್ರಕಟಿಸಿದರು. ಗೋಕಾಕ ಹಾಗೂ ಬೆಳಗಾವಿಯಲ್ಲಿ ಅಧಿಕಾರ ಹಿಡಿಯಲು ಪ್ರಯತ್ನ ನಡೆಸಲಾಗುತ್ತದೆ. ಬೆಳಗಾವಿಯಲ್ಲಿ ಎಂಇಎಸ್ ಬೆಂಬಲದೊಂದಿಗೆ ಅಧಿಕಾರ ಹಿಡಿಯಲಾಗುತ್ತದೆ. ಗೋಕಾಕಿನಲ್ಲಿ ಪಕ್ಷೇತರ ಸದಸ್ಯರೊಬ್ಬರ ಬೆಂಬಲದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಾಗುತ್ತದೆ. ಆ ಮೂಲಕ ಜಿಲ್ಲೆಯ ಎಲ್ಲ 10 ತಾಪಂಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯ ಜನತೆ ಬಿಜೆಪಿಗೆ ಅಭೂತಪೂರ್ವ ಬೆಂಬಲ ನೀಡಿದೆ. ಜನತೆ ನೀಡಿರುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಲಾಗುತ್ತದೆ. ಪಕ್ಷದಿಂದ ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳಾದ ಅರಬಾವಿ ಹಾಗೂ ಕಾಗವಾಡಗಳಲ್ಲಿ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಆ ಮೂಲಕ ಈ ಕ್ಷೇತ್ರಗಳ ಉಪ ಚುನಾವಣೆ ಸುಲಭವಾಗಿದೆ ಎಂದು ಅವರು ಹೇಳಿದರು.

ವಿಶ್ವಕನ್ನಡ ಸಮ್ಮೇಳನ: ಚುನಾವಣಾ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ವಿಶ್ವ ಕನ್ನಡ ಸಮ್ಮೇಳನದ ಸಿದ್ಧತೆ ನಡೆಸಲಾಗುತ್ತದೆ. ವಿಶ್ವ ಕನ್ನಡ ಸಮ್ಮೇಳನವನ್ನು ಮುಂದೂಡುವ ಪ್ರಶ್ನೆಯೇ ಇಲ್ಲ. ಎಂದೂ ಅವರು ತಿಳಿಸಿದರು. ಸಂಸದ ಸುರೇಶ ಅಂಗಡಿ, ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ, ರಾಘವೇಂದ್ರ ಪೂಜಾರಿ, ಮಲ್ಲಿಕಾರ್ಜುನ ತುಬಾಕಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.