ADVERTISEMENT

ಆರೋಗ್ಯ ವ್ಯವಸ್ಥೆ ಅಲಕ್ಷ್ಯ: ವಿಷಾದ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2012, 6:55 IST
Last Updated 18 ಫೆಬ್ರುವರಿ 2012, 6:55 IST

ಬಾಗಲಕೋಟೆ: ವಿಶ್ವದಲ್ಲಿ ಅತೀ ಹೆಚ್ಚು ವೈದ್ಯಕೀಯ ಸಿಬ್ಬಂದಿ ಭಾರತದಲ್ಲಿ ತಯಾರಾಗುತ್ತಿದ್ದರೂ ಸಹ ವೈದ್ಯಕೀಯ ಪ್ರತಿಭಾ ಫಲಾಯನದಿಂದಾಗಿ ದೇಶದ ಆರೋಗ್ಯ ವ್ಯವಸ್ಥೆ ಅಲಕ್ಷ್ಯಕ್ಕೆ ಒಳಗಾಗಿದೆ ಎಂದು ಬೆಳಗಾವಿಯ ಕೆ.ಎಲ್.ಇ ಹಾರ್ಟ್ ಫೌಂಡೇಶನ್ ನಿರ್ದೇಶಕ ಡಾ. ಎಂ. ಡಿ. ದೀಕ್ಷಿತ್ ಅಭಿಪ್ರಾಯಪಟ್ಟರು.

ನಗರದ ಬಿ.ವಿ.ವಿ. ಸಂಘದ ಎಸ್. ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಬಾಯಿ ಮತ್ತು ಮುಖದ ಶಸ್ತ್ರ ಚಿಕಿತ್ಸಕರ ಎರಡನೇ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ವಿದೇಶದಲ್ಲಿರುವ ಆರೋಗ್ಯ ವ್ಯವಸ್ಥೆಗಿಂತ ಭಾರತದಲ್ಲಿನ ಆರೋಗ್ಯ ವ್ಯವಸ್ಥೆ ಕನಿಷ್ಠ ಮಟ್ಟದಲ್ಲಿದೆ ಎಂದ ಅವರು, ಜರ್ಮನಿಯಲ್ಲಿ ಪ್ರತೀ 300 ಜನರಿಗೆ ಒಬ್ಬ ವೈದ್ಯರಿದ್ದಾರೆ, ಆದರೆ ಭಾರತದಲ್ಲಿ ಪ್ರತೀ 2500 ಜನರಿಗೆ ಒಬ್ಬ ವೈದ್ಯರಿದ್ದಾರೆ. ಅದರಲ್ಲೂ ದೇಶದ ಗ್ರಾಮೀಣ ಭಾಗದ ಆರೋಗ್ಯ ವ್ಯವಸ್ಥೆ ತೀರಾ ಕನಿಷ್ಠವಾಗಿದೆ ಎಂದರು.

ಭಾರತದಲ್ಲಿ ಉತ್ತಮ ವೈದ್ಯಕೀಯ ಸೌಲಭ್ಯ ಹೊಂದಿರುವ ನಗರಗಳಲ್ಲಿ ಚನ್ಹೈ ಪ್ರಥಮ ಸ್ಥಾನದಲ್ಲಿದೆ ಹಾಗಯೇ  ಬೆಂಗಳೂರು ನಗರ ದ್ವಿತೀಯ ಸ್ಥಾನದಲ್ಲಿದೆ ಎಂದು ಹೇಳಿದರು.
 ಉತ್ತರ ಕರ್ನಾಟಕದ ಆರೋಗ್ಯ ವ್ಯವಸ್ಥೆ ಕನಿಷ್ಠವಾಗಿದ್ದು, ಇದರ ಸುಧಾರಣೆಗೆ ವೈದ್ಯಕೀಯ ಸಮ್ಮೇಳನಗಳು ಪೂರಕವಾಗಿವೆ ಎಂದರು.

ದೇಶದ ವೈದ್ಯಕೀಯ ಸವಾಲುಗಳನ್ನು ಸರಿಯಾಗಿ ಎದುರಿಸಿದ್ದೇ ಆದರೆ 2030ರಿಂದ 2040ದ ವೇಳೆಗೆ ಉತ್ತಮ ಆರೋಗ್ಯ ವ್ಯವಸ್ಥೆ ಕಲ್ಪಿಸಬಹುದಾಗಿದೆ ಎಂದು ಹೇಳಿದರು.


ಡಾ. ಎಸ್. ಪ್ರಭು ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾದ್ಯಕ್ಷ ಸಿದ್ದಣ್ಣ ಶೆಟ್ಟರ ಅಧ್ಯಕ್ಷತೆ ವಹಿಸಿದ್ದರು.  ಸಮ್ಮೇಳನ ಅಧ್ಯಕ್ಷ ಡಾ.ಬಸವರಾಜ ಸಿಕ್ಕೇರಿಮಠ, ಕಾರ್ಯದರ್ಶಿ ಡಾ. ಸಂತೋಷ ಗುಡಿ, ದಂತ ಕಾಲೇಜಿನ ಪ್ರಾಚಾರ್ಯ ಡಾ. ಶ್ರಿನಿವಾಸ್ ವನಕಿ, ಡಾ. ಕುಮಾರಸ್ವಾಮಿ,ಡಾ. ಸತ್ಯಜೀತ್ ದಂಡಗಿ ಉಪಸ್ಥಿತರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT